ಶಾಲಾ ಅಭಿವೃದ್ಧಿಗೆ ಬಂದ ಲಕ್ಷಾಂತರ ರೂ. ದುರುಪಯೋಗ ಆರೋಪ: ಮುಖ್ಯಶಿಕ್ಷಕನ ವಜಾಕ್ಕೆ ಒತ್ತಾಯ
ಚಿಕ್ಕಮಗಳೂರು: ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶಾಲಾ ಕಟ್ಟಡ ಹರಾಜು ,ಮೇಲ್ಚಾವಣಿಗೆ ಬಳಸಿದ್ದ ಸಿಮೆಂಟ್ ಶೀಟುಗಳ ಮಾರಾಟ ಮಾಡಿದ್ದು, ಅವರನ್ನು ತಕ್ಷಣವೇ ಸೇವೆಯಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ.
ಮೂಡಿಗೆರೆ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಶಾಲಾ ಅಭಿವೃದ್ಧಿಗೆ ಸರ್ಕಾರದಿಂದ ಲಕ್ಷಾಂತರ ಅನುದಾನ ಬಂದಿದ್ದು, ಆದರೆ, ಇದರಿಂದ ಲಕ್ಷಾಂತರ ಹಣ ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಶಾಲಾ ಕಟ್ಟಡ ಹರಾಜು ,ಮೇಲ್ಚಾವಣಿಗೆ ಬಳಸಿದ್ದ ಸಿಮೆಂಟ್ ಶೀಟುಗಳ ಮಾರಾಟ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ರು. ಬೀಳುವ ಸ್ಥಿತಿಯಲ್ಲಿರುವ ಬಿಳುಗುಳದ ಸರ್ಕಾರಿ ಶಾಲೆಯ ದುರಸ್ತಿಗೆ ಬಂದ ಅನುದಾನವನ್ನು ದುರುಪಯೋಗ ಮಾಡಲಾಗಿದೆ ಎಂದು ಆರೋಪಿಸಿದ್ದು, ಮುಖ್ಯಶಿಕ್ಷಕನ ವಜಾಕ್ಕೆ ಒತ್ತಾಯಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw