ಟ್ರಯಲ್ ನೋಡಲು ತಂದ ಕಾರು ಬಾಲಕನಿಗೆ ಡಿಕ್ಕಿ: ಬಾಲಕ ಸ್ಥಳದಲ್ಲೇ ಸಾವು: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ - Mahanayaka
7:14 AM Thursday 12 - December 2024

ಟ್ರಯಲ್ ನೋಡಲು ತಂದ ಕಾರು ಬಾಲಕನಿಗೆ ಡಿಕ್ಕಿ: ಬಾಲಕ ಸ್ಥಳದಲ್ಲೇ ಸಾವು: ಸಿಸಿ ಕ್ಯಾಮರದಲ್ಲಿ ದೃಶ್ಯ ಸೆರೆ

student
27/12/2022

ಮಂಗಳೂರು: ರಸ್ತೆ ಬದಿ ನಿಂತಿದ್ದ 8ನೇ ತರಗತಿ ವಿದ್ಯಾರ್ಥಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಮುಡಿಪುವಿನಲ್ಲಿ ನಡೆದಿದೆ.

ಕಾರ್ತಿಕ್ (14) ಮೃತ ಬಾಲಕ. ಈತ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ.

mudipu accident

ಕಾರು ಚಾಲಕನ ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಬಾಲಕನಿಗೆ ಡಿಕ್ಕಿ ಹೊಡೆದ ಕಾರು ನಂತರ ಸಮೀಪದಲ್ಲೇ ಇದ್ದ ರಿಕ್ಷಾಗೂ ಡಿಕ್ಕಿ ಹೊಡೆದಿದೆ.  ಕಾರು ಮಾಲೀಕ ಟ್ರಯಲ್  ನೋಡಲು ಗೆಳೆಯನಿಗೆ ಕಾರು ನೀಡಿದ್ದ ಸಂದರ್ಭ ಘಟನೆ ಸಂಭವಿಸಿದೆ ಎನ್ನಲಾಗಿದೆ. ಮಂಗಳೂರು ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ