ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಪತ್ತೆಯಾಗಿದ್ದ ಇಬ್ಬರು ಮಹಿಳೆಯರು ಪತ್ತೆ!
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ತಿಂಗಳ ಹಿಂದೆ ಪ್ರತ್ಯೇಕ ಘಟನೆಗೆ ಸಂಬಂಧಿಸಿದ ಕಾಣೆಯಾಗಿದ್ದ ಇಬ್ಬರು ಮಹಿಳೆಯರನ್ನು ಪತ್ತೆ ಹಚ್ಚಲಾಗಿದೆ.
ನಾಪತ್ತೆಯಾಗಿದ್ದ. ಮಹಾಲಕ್ಷ್ಮಿ ಎಂಬುವರನ್ನು ಬೆಳ್ತಂಗಡಿ ಪರಿಸರದಲ್ಲಿ ಪತ್ತೆ ಹಚ್ಚಿದರೆ, ನಾಗವೇಣಿಯನ್ನು ಮಹಾರಾಷ್ಟ್ರದ ಪುಣೆಯಲ್ಲಿ ಪತ್ತೆ ಹಚ್ಚಲಾಗಿದೆ.
ಮಹಾಲಕ್ಷ್ಮಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಬಳಿ ರಬ್ಬರ್ ಟೇಪಿಂಗ್ ಕೆಲಸಕ್ಕೆ ಸೇರಿಕೊಂಡಿರುವ ಮಾಹಿತಿ ಸಂಗ್ರಹಿಸಿದ ಪೊಲೀಸರು ಅಲ್ಲಿಗೆ ತೆರಳಿ ಆಕೆಯನ್ನು ಸುಳ್ಯ ಠಾಣೆಗೆ ಕರೆತಂದು ಮನೆಯವರನ್ನು ಕರೆಸಿ ಮಾತುಕತೆ ನಡೆಸಿ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ.
ನಾಗವೇಣಿ ಎಂಬ ಮಹಿಳೆ ತನ್ನ ಪ್ರಿಯಕರನೊಂದಿಗೆ ಮಹಾರಾಷ್ಟ್ರದ ಪುಣೆಯಲ್ಲಿ ಇರುವ ಮಾಹಿತಿ ಸಂಗ್ರಹಿಸಿದ ಸುಳ್ಯ ಪೊಲೀಸರು ಆಕೆಯ ಪತಿಯನ್ನು ಮಹಿಳೆ ಇರುವ ಸ್ಥಳಕ್ಕೆ ಕರೆದೊಯ್ದು ವಿಚಾರಿಸಿದಾಗ ಆಕೆ ತನ್ನ ಪತಿಯೊಂದಿಗೆ ಬರಲು ನಿರಾಕರಿಸಿದ್ದು ಪ್ರಿಯಕರನೊಂದಿಗೆ ಇರುವುದಾಗಿ ಪಟ್ಟು ಹಿಡಿದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿ ಅವರಿಬ್ಬರ ಹೇಳಿಕೆಗಳನ್ನು ಪಡೆದು ಬಂದಿದ್ದಾರೆ ಎಂದು ತಿಳಿದು ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka