ಹೊಸ ವರ್ಷಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ 12:30ರವರೆಗೆ ಮಾತ್ರ ಅವಕಾಶ - Mahanayaka
11:16 AM Thursday 12 - December 2024

ಹೊಸ ವರ್ಷಾಚರಣೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿ 12:30ರವರೆಗೆ ಮಾತ್ರ ಅವಕಾಶ

new year
29/12/2022

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್‌ ಗಳಲ್ಲಿ ಡಿಸೆಂಬರ್ 31 ರಂದು ರಾತ್ರಿ 12:30 ರವರೆಗೆ ಮಾತ್ರ ಹೊಸ ವರ್ಷ ಆಚರಣೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಆದೇಶ ನೀಡಿದ್ದಾರೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.  ಆದರೆ, ಧ್ವನಿವರ್ಧಕ ಹಾಗೂ ಶಬ್ದಯುಂಟು ಮಾಡುವ ಉಪಕರಣಗಳನ್ನು ರಾತ್ರಿ 10ರ ಬಳಿಕ ಬಳಸುವಂತಿಲ್ಲ ಎಂದು ತಿಳಿಸಲಾಗಿದೆ.

ಕಾರ್ಯಕ್ರಮ ಆಯೋಜನೆಗೆ ಸಂಬಂಧಪಟ್ಟ ಪೊಲೀಸ್‌ ಇಲಾಖೆ, ನಗರ ಸ್ಥಳೀಯ ಸಂಸ್ಥೆ, ಗ್ರಾಮೀಣ ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆಯತಕ್ಕದ್ದು. ಸಭಾಂಗಣ, ತೆರೆದ ಸ್ಥಳ, ಕಲ್ಯಾಣ ಮಂಟಪ, ಸಭಾ ಭವನ, ಅಪಾರ್ಟ್‌ಮೆಂಟ್, ಕಡಲ ತೀರ, ಹೋಮ್ ಸ್ಟೇ, ಮಾಲ್ ಪ್ರದೇಶಗಳಲ್ಲಿ ಡಿಜೆ, ಜಾಲಿ ಡಾಡ್ಸ್ ಗಳನ್ನು ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.

ಕಾರ್ಯಕ್ರಮ ಆಯೋಜಕರು ಕಡ್ಡಾಯವಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಅಬಕಾರಿ ಇಲಾಖೆ ಮತ್ತು ವಿವಿಧ ಇಲಾಖೆಗಳಿಂದ ಅನುಮತಿ ಪಡೆದಂತಹ ಹೋಂ ಸ್ಟೇ, ಪಬ್, ಕ್ಲಬ್ ಪರಿಸರದಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸಬಾರದು. ಯಾವುದೇ ರೀತಿ ಕಾನೂನು ಬಾಹಿರ ಚಟುವಟಿಕೆ ನಡೆದಲ್ಲಿ ಮಾಲಕರನ್ನೇ ಜವಾಬ್ದಾರರನ್ನಾಗಿ ಮಾಡಿ ಕ್ರಮವಹಿಸಲಾಗುವುದು ಎಂದು ತಿಳಿಸಲಾಗಿದೆ.

ಪಬ್, ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಅಶ್ಲೀಲ ನೃತ್ಯ, ಗಾಂಜಾ, ಅಫೀಮು, ಮತ್ತಿತರರ ಮತ್ತೇರಿಸುವ ಅಮಲು ಪದಾರ್ಥಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ