ಭೂಕಬಳಿಕೆ ಕಾಯ್ಕೆ: ಗ್ರಾಮೀಣ ರೈತರನ್ನು ಹೊರಗಿಟ್ಟಿರುವುದು ಸ್ವಾಗತಾರ್ಹ | ಬೆಳೆಗಾರರ ಸಂಘ ಹೇಳಿಕೆ
ಕೊಟ್ಟಿಗೆಹಾರ: ರಾಜ್ಯ ಸರ್ಕಾರ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು 192/ಎ ಭೂಕಬಳಿಕೆ ಕಾಯ್ಕೆ ತಿದ್ದುಪಡಿಗೆ ಒಪ್ಪಿಗೆ ನೀಡಿ ಕಾಯ್ದೆಯಿಂದ ಗ್ರಾಮೀಣ ಭಾಗದ ರೈತರನ್ನು ಹೊರಗಿಟ್ಟಿರುವುದನ್ನು ಕರ್ನಾಟಕ ಬೆಳೆಗಾರರ ಒಕ್ಕೂಟ, ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘ ಸ್ವಾಗತಿಸುತ್ತದೆ ಎಂದು ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಳೂರು ಹೇಳಿದರು.
ಕೊಟ್ಟಿಗೆಹಾರದಲ್ಲಿ ಗುರುವಾರ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು, ಸರ್ಕಾರಿ ಜಮೀನಿನ ಒತ್ತುವರಿ ಸಮಸ್ಯೆ ಸಂಬಂಧಿಸಿದಂತೆ ಜಮೀನನ್ನು ಕೇರಳ ಮಾದರಿಯಲ್ಲಿ ಗುತ್ತಿಗೆ ಆಧಾರದಲ್ಲಿ ನೀಡಲು ಸರ್ಕಾರ ಅನುಮತಿ ನೀಡಿರುವುದು ಶ್ಘಾಘನೀಯ. ಕಾಫಿ ಬೆಳೆಗಾರರಿಗೆ ಉಚಿತ 10 ಹೆಚ್ ವರೆಗೆ ಉಚಿತ ವಿದ್ಯುತ್ ನೀಡಿರುವುದು ಕಾಫಿ ಬೆಳೆಗಾರರಿಗೆ ಅನುಕೂಲವಾಗಿದ್ದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು, ಕಂದಾಯ ಸಚಿವರಾದ ಆರ್.ಅಶೋಕ್, ಇಂಧನ ಸಚಿವರಾದ ಸುನೀಲ್ ಕುಮಾರ್, ಶಾಸಕರು, ವಿಧಾನ ಪರಿಷತ್ ಸದಸ್ಯರು, ವಿರೋಧ ಪಕ್ಷದ ನಾಯಕರು ಸಹಕಾರ ನೀಡಿದ್ದು ಕರ್ನಾಟಕ ಬೆಳೆಗಾರರ ಒಕ್ಕೂಟ, ಮೂಡಿಗೆರೆ ತಾಲ್ಲೂಕು ಬೆಳೆಗಾರರ ಸಂಘವು ಇದನ್ನು ಸ್ವಾಗತಿಸುತ್ತದೆ ಮತ್ತು ರಾಜ್ಯ ಸರ್ಕಾರಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತದೆ ಎಂದರು.
ಸರ್ಕಾರ ಈ ಹಿಂದೆ ಮೂರು ಕಾಡಾನೆಗಳನ್ನು ಹಿಡಿಯಲು ಅನುಮತಿ ನೀಡಿದ್ದು ಮತ್ತೆ 5 ಕಾಡಾನೆಗಳನ್ನು ಹಿಡಿಯಲು ಅನುಮತಿ ನೀಡಿರುವುದು ಕಾಡಾನೆ ಉಪಟಳ ತಡೆಗೆ ಸಹಕಾರಿ ಆಗಲಿದೆ. ಮಲೆನಾಡು ಭಾಗದಲ್ಲಿ ಕಾಡಾನೆಗಳಿಂದ ಬೆಳೆಹಾನಿ, ಜೀವಹಾನಿ ಹೆಚ್ಚಿದ್ದು ಕಾಡಾನೆ ಸ್ಥಳಾಂತರಕ್ಕೆ ಅನುಮತಿ ನೀಡಿರುವುದು ಉತ್ತಮ ಬೆಳವಣಿಗೆಯಾಗಿದೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka