ಆಮ್ ಆದ್ಮಿ ಪಾರ್ಟಿ ವತಿಯಿಂದ ಹೊಸ ವರ್ಷಾಚರಣೆ
2023 ಆಗಮಿಸಿದೆ. ಈ ಹೊಸ ವರ್ಷಾಚರಣೆಯನ್ನು ದಕ್ಷಿಣ ಕನ್ನಡ ಆಮ್ ಆದ್ಮಿ ಪಾರ್ಟಿ ವತಿಯಿಂದ ಸಂಭ್ರಮದಿಂದ ಆಚರಿಸಲಾಯಿತು.
ದಕ್ಷಿಣ ಕನ್ನಡ ಆಮ್ ಆದ್ಮಿ ಪಾರ್ಟಿ ಪಕ್ಷದ ಕಚೇರಿಯಲ್ಲಿ ಹೊಸ ವರ್ಷದ ಕೇಕ್ ಕತ್ತರಿಸಿ ಪರಸ್ಪರ ಶುಭಾಶಯ ಕೋರಿ ಹೊಸ ವರ್ಷದ ಆಗಮನವನ್ನು ಮುಂಬರುವ ದಿನಗಳು ಉಜ್ವಲವಾಗಿರಲಿ ಎಂದು ಹಾರೈಸಿ ಸ್ವಾಗತಿಸಲಾಯಿತು.
2022 ಮುಗಿದು 2023 ಹೊಸ ವರ್ಷದೊಂದಿಗೆ ಆಮ್ ಆದ್ಮಿ ಪಾರ್ಟಿಯು ದೇಶದ ರಾಷ್ಟ್ರೀಯ ಮಾನ್ಯತೆ ಪಡೆದ ರಾಜಕೀಯ ಪಕ್ಷವಾಗಿ ಮನ್ನಣೆ ಪಡೆದುಕೊಳ್ಳುತ್ತಿರುವುದು ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರಿಗೆ ತುಂಬಾ ಸಂತೋಷದ ವಿಚಾರವಾಗಿದೆ.
ಈ ಕಾರ್ಯಕ್ರಮದಲ್ಲಿ ಎಎಪಿ ದ.ಕ ಅಧ್ಯಕ್ಷ ಸಂತೋಷ್ ಕಾಮತ್,ಆಮ್ ಆದ್ಮಿ ಪಾರ್ಟಿ ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಅಝ್ಫರ್ ರಜಾಕ್, ಜೈದೇವ್ ಕಾಮತ್, ಬೆನೆಟ್ ಮೊರಾಸ್, ರೋನಿ ಕ್ರಾಸ್ತಾ, ಹಮೀದ್, ನಜೀರ್ ಅಹಮದ್ ಮತ್ತಿತರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw