ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್ ಎಫ್ ಯೋಧ ಹೃದಯಾಘಾತದಿಂದ ನಿಧನ
![harish kumar](https://www.mahanayaka.in/wp-content/uploads/2023/01/harish-kumar.jpg)
ರಜೆಯಲ್ಲಿ ಊರಿಗೆ ಆಗಮಿಸಿದ್ದ ಬಿಎಸ್ ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ರವಿವಾರ ಮಂಗಳೂರು ನಗರದಲ್ಲಿ ನಡೆದಿದೆ.
ಕುಲಶೇಖರ ಸಮೀಪದ ಉಮಿಕಾನ ನಿವಾಸಿ ಹರೀಶ್ ಕುಮಾರ್(43) ಮೃತಪಟ್ಟ ಬಿಎಸ್ ಎಫ್ ಯೋಧ. ಮೃತರು ಪತ್ನಿ, 6 ವರ್ಷದ ಪುತ್ರ, ಒಂದೂವರೆ ವರ್ಷದ ಪುತ್ರಿ ಮತ್ತು ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಕಳೆದ 21 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಅವರು ಸೇವೆ ಸಲ್ಲಿಸುತ್ತಿದ್ದರು. 142ನೇ ಬಟಾಲಿಯನ್ ಒಡಿಶಾದಲ್ಲಿ ಕರ್ತವ್ಯದಲ್ಲಿದ್ದು, ರಜೆಯ ಹಿನ್ನೆಲೆಯಲ್ಲಿ ಊರಿಗೆ ಆಗಮಿಸಿದ್ದರು. ಶನಿವಾರ ಅವರಿಗೆ ಹೃದಯಾಘಾತವಾಗಿತ್ತು.
ತಕ್ಷಣ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಕೊನೆಯುಸಿರೆಳೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw