ಅಮೂಲ್ ಜೊತೆಗೆ ನಂದಿನಿ ವಿಲೀನ: ಅಮಿತ್ ಶಾ ಹಾಗೆ ಹೇಳಿಲ್ಲ ಎಂದ ಸಿಎಂ ಬೊಮ್ಮಾಯಿ
ಬೆಂಗಳೂರು: ಗುಜರಾತ್ ನ ಅಮುಲ್ ಜೊತೆಗೆ ಕರ್ನಾಟಕದ ನಂದಿನಿಯನ್ನು ಒಂದು ಗೂಡಿಸಲು ಕ್ರಮಕೈಗೊಳ್ಳಲಾಗುವುದು ಅನ್ನೋ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ರಾಜ್ಯದಲ್ಲಿ ತೀವ್ರ ಆಕ್ರೋಶವನ್ನುಂಟು ಮಾಡಿದೆ. ಈ ವಿಚಾರ ತೀವ್ರತೆ ಪಡೆದುಕೊಳ್ಳುತ್ತಿದ್ದಂತೆಯೇ ಸಿಎಂ ಬಸವರಾಜ್ ಬೊಮ್ಮಾಯಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಯಾವುದೇ ಕಾರಣಕ್ಕೂ ಅಮುಲ್ ಕೆಎಂಎಫ್ ವಿಲೀನ ಮಾಡುವುದಿಲ್ಲ. ಅಮಿತ್ ಶಾ ಅವರು ತಮ್ಮ ಭಾಷಣದಲ್ಲಿ ವಿಲೀನ ಮಾಡುತ್ತೇವೆ ಎಂದು ಎಲ್ಲೂ ಹೇಳಿಲ್ಲ, ಯಾರಿಗೂ ತಪ್ಪು ಕಲ್ಪನೆ ಬೇಡ. ಇನ್ನು 100 ವರ್ಷವಾದರೂ ಕೆಎಂಎಫ್ ಹಾಗೆಯೇ ಇರುತ್ತದೆ ಎಂದು ಅವರು ಹೇಳಿದ್ದಾರೆ.
ಊಹೆ ಮಾಡಿ ಟೀಕೆ ಮಾಡುವವರಿಗೆ ಏನು ಹೇಳುವುದು? ಒಬ್ಬರಿಗೊಬ್ಬರು ತಾಂತ್ರಿಕ ಸಹಾಯದಿಂದ ಕೆಲಸ ಮಾಡಬೇಕು ಎಂದು ಅಮಿತ್ ಶಾ ಹೇಳಿದ್ದಾರೆ. ಈ ಬಗ್ಗೆ ಯಾವುದೇ ತಪ್ಪು ತಿಳುವಳಿಕೆ ಬೇಡ ಎಂದು ಸಿಎಂ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka