ಹುರುಳಿ ಸೆತ್ತೆಯಿಂದಾಗಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದ 6 ಜನರಿದ್ದ ಕಾರು
ಚಾಮರಾಜನಗರ: ರಸ್ತೆಯಲ್ಲಿ ಹಾಕಿದ್ದ ಹುರುಳಿ ಸೆತ್ತೆ ಕಾರಿನ ಚಕ್ರಕ್ಕೆ ಸಿಲುಕಿಕೊಂಡ ಪರಿಣಾಮ ಕಾರು ಹೊತ್ತಿ ಉರಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಹೊನ್ನೇಗೌಡನಹಳ್ಳಿ–ಗೋಪಾಲಪುರ ರಸ್ತೆಯಲ್ಲಿ ನಡೆದಿದೆ.
ಹೊಸವರ್ಷದ ದಿನದಂದು ಬಂಡೀಪುರದಲ್ಲಿ ಸುತ್ತಾಡಿ ಕೇರಳದ ವೈನಾಡಿಗೆ ಕೇರಳ ನೋಂದಣಿಯ ಕಾರು ಹೊನ್ನೇಗೌಡನಹಳ್ಳಿ-ಗೋಪಾಲಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಕಾರಿನ ಚಕ್ರಕ್ಕೆ ಹುರುಳಿ ಸೆತ್ತೆ ಸುತ್ತಿಕೊಂಡಿದೆ. ಇದರಿಂದ ಕ್ಷಣ ಮಾತ್ರದಲ್ಲಿ ಬೆಂಕಿ ಹೊತ್ತಿಕೊಂಡು ಧಗಧಗಿಸಿದೆ.
ಕೂಡಲೇ ಕಾರಿನಲ್ಲಿದ್ದ 6 ಮಂದಿ ಯುವಕರು ತಮ್ಮ ವಸ್ತುಗಳ ಸಮೇತ ಕೆಳಗಿಳಿದಿದ್ದಾರೆ. ನಂತರ ಕಾರಿನ ತುಂಬಾ ಬೆಂಕಿ ಆವರಿಸಿಕೊಂಡು ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳದಲ್ಲಿದ್ದ ಕೆಲವರು ಬೆಂಕಿ ನಂದಿಸುವ ಕೆಲಸ ಮಾಡಿದರಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಳಿಕ, ಮಾಹಿತಿ ಅರಿತ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಗುಂಡ್ಲುಪೇಟೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw