ಖೋಟಾ ನೋಟು ಚಲಾವಣೆ: ಇಬ್ಬರು ಆರೋಪಿಗಳ ಬಂಧನ
ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಆರೋಪದ ಮೇರೆಗೆ ಮಂಗಳೂರಿನ ಕದ್ರಿ ಪೊಲೀಸರು ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಂತೂರು ಜಂಕ್ಷನ್ ಬಳಿ ಪೊಲೀಸರನ್ನು ಕಂಡು ತಪ್ಪಿಸಿಕೊಳ್ಳಲು ಯತ್ನಿಸಿದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಖೋಟಾ ನೋಟುಗಳನ್ನು ಚಲಾವಣೆಯ ಜಾಲ ಬಯಲಿಗೆ ಬಂದಿದೆ ಎಂದು ಮಾಹಿತಿ ನೀಡಿದರು.
ಬಂಧಿತರನ್ನು ನಿಝಾಮುದ್ದೀನ್ ಯಾನೆ ನಿಝಾಮ್ (32), ರಝೀಮ್ ಯಾನೆ ರಾಫಿ (31) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 500 ರೂಪಾಯಿ ಮುಖಬೆಲೆಯ 4.50 ಲಕ್ಷ ರೂಪಾಯಿ ಖೋಟಾ ನೋಟುಗಳನ್ನು ವಶಪಡಿಸಲಾಗಿದೆ ಎಂದರು.
ಬೆಂಗಳೂರಿನ ಡ್ಯಾನಿಯಲ್ ಎಂಬಾತನಿಂದ ಖೋಟಾ ನೋಟುಗಳನ್ನು ಪಡೆದಿರುವ ಆರೋಪಿಗಳು ನಗರದಲ್ಲಿ ಸ್ಕೂಟರ್ವೊಂದನ್ನು ಕದ್ದು ಅದರಲ್ಲಿ ಹಣ ಚಲಾವಣೆಗೆ ಯತ್ನಿಸುತ್ತಿದ್ದರು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka