ಆಟವಾಡುತ್ತಿದ್ದ ಮಕ್ಕಳಿಗೆ ಹಲ್ಲೆ ಪ್ರಕರಣ: ಪೊಲೀಸ್ ಕಾನ್ ಸ್ಟೇಬಲ್ ಅಮಾನತು
ಮಂಗಳೂರು ನಗರದ ಹೊರವಲಯದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ತಣ್ಣೀರುಬಾವಿಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ದೌರ್ಜನ್ಯ ಎಸಗಿದ್ದ ಪೊಲೀಸ್ ಸಿಬ್ಬಂದಿಯನ್ನು ಪೊಲೀಸ್ ಕಮಿಷನರ್ ಶಶಿಕುಮಾರ್ ಅಮಾನತು ಮಾಡಿ ಆದೇಶಿಸಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಕಾನ್ ಸ್ಟೇಬಲ್ ಸುನೀಲ್ ನನ್ನು ಇಲಾಖಾ ತನಿಖೆಗೊಳಪಡಿಸಿ ಅಮಾನತು ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬಾಲಕನ ಪೋಷಕರು ಮತ್ತು ಬಾಲಕರಿಂದ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಕಮಿಷನರ್ ಸ್ಪಷ್ಟಪಡಿಸಿದ್ದಾರೆ.
ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಣ್ಣೀರಬಾವಿಯಲ್ಲಿ ಕ್ರಿಕೆಟ್ ಆಡಿ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಪೊಲೀಸರು ಬಾಲಕರಿಗೆ ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಘಟನೆಯಿಂದ 9ನೇ ತರಗತಿಯ ಬಾಲಕನೊಬ್ಬನಿಗೆ ಗಂಭೀರ ಗಾಯಗೊಂಡಿತ್ತು ಎನ್ನಲಾಗಿದ್ದು, ಸ್ಥಳೀಯರು ಪೊಲೀಸರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ಪೊಲೀಸರ ಜೊತೆ ವಾಗ್ಬಾದ ನಡೆಸಿದ್ದರು. ಈ ಕುರಿತ ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw