ಚಲಿಸುತ್ತಿದ್ದ ವೇಳೆಯೇ ನಡು ರಸ್ತೆಯಲ್ಲೇ ಬೆಂಕಿ ಹತ್ತಿಕೊಂಡು ಧಗಧಗನೆ ಉರಿದ ಕಾರು
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರೊಂದು ರಸ್ತೆ ಮಧ್ಯೆಯೇ ಏಕಾಏಕಿ ಬೆಂಕಿ ಹತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಆತಂಕಕಾರಿ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ನಲ್ಲಿ ನಡೆದಿದೆ.
ಕೆಎ 05, ಬೆಂಗಳೂರು ನೋಂದಣಿಯ ಕಾರು ಹೊತ್ತಿ ಉರಿದ ಕಾರಾಗಿದ್ದು, ಘಟನೆಯ ವೇಳೆ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ ಇವರು ಕಾರಿನಿಂದ ಇಳಿದು ಓಡಿದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ.
ಇಲ್ಲಿನ ಆಟೋ ಲಿಂಕ್ಸ್ ನಿಂದ ಟ್ರಯಲ್ ಗೆ ಕಾರನ್ನು ತರಲಾಗಿತ್ತು. ಈ ಕಾರು ನಡು ರಸ್ತೆಯಲ್ಲಿಯೇ ಹೊತ್ತಿ ಉರಿದಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ, ಹೆಚ್ಚಿನ ಅಪಾಯವನ್ನು ತಪ್ಪಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw