ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ಸೇವಿಸಿ ವಿದ್ಯಾರ್ಥಿನಿ ಸಾವು!
ತಿರುವನಂತಪುರಂ: ಆನ್ ಲೈನ್ ನಿಂದ ಆರ್ಡರ್ ಮಾಡಿ ಖರೀದಿಸಿದ್ದ ಬಿರಿಯಾನಿ ಸೇವಿಸಿದ ವಿದ್ಯಾರ್ಥಿನಿಯೋರ್ವಳು ಅಸ್ವಸ್ಥಗೊಂಡು ಸಾವನ್ನಪ್ಪಿದ ದಾರುಣ ಘಟನೆ ಕೇರಳದಲ್ಲಿ ನಡೆದಿದೆ.
ಕಾಸರಗೋಡು ಸಮೀಪದ ಪೆರುಂಬಳದ ಅಂಜು ಶ್ರೀಪಾರ್ವತಿ ಎಂಬವರು ಮೃತಪಟ್ಟವರಾಗಿದ್ದರು, ಇವರು ‘ಕುಜಿಮಂತಿ’ ಎಂಬ ಕೇರಳ ಬಿರಿಯಾನಿಯನ್ನು ಹೊಟೇಲ್ ವೊಂದರಿಂದ ಆನ್ ಲೈನ್ ನಲ್ಲಿ ಖರೀದಿಸಿ ಸೇವಿಸಿದ್ದರು.
ಬಿರಿಯಾನಿ ಸೇವಿಸಿದ ಬಳಿಕ ಅಸ್ವಸ್ಥಗೊಂಡಿದ್ದ ಯುವತಿಯನ್ನು ಪೋಷಕರು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಬಳಿಕ ಅಲ್ಲಿಂದ ಮಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ, ಮಂಗಳೂರಿನ ಆಸ್ಪತ್ರೆಯಲ್ಲಿ ಯುವತಿ ಸಾವನ್ನಪ್ಪಿದ್ದಾಳೆ.
ಕೇರಳದಲ್ಲಿ ಫುಡ್ ಪಾಯ್ಸನ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಫುಡ್ ಪಾಯ್ಸನ್ ನಿಂದ ಸಾವಿಗೀಡಾದ ಹಲವು ಪ್ರಕರಣಗಳು ಈಗಾಗಲೇ ನಡೆದಿದ್ದರೂ, ಮತ್ತೆ ಮತ್ತೆ ಇಂತಹ ಘಟನೆಗಳು ಪುನರಾವರ್ತನೆಯಾಗುತ್ತಿದೆ. ಘಟನೆ ವಿರುದ್ಧ ವ್ಯಾಪಕ ಆಕ್ರೋಶ ಒಂದೆಡೆಯಾದರೆ, ಹೊಟೇಲ್ ಗಳಿಂದ ಆಹಾರ ಖರೀದಿಸಲು ಸಾರ್ವಜನಿಕರು ಹಿಂದೇಟು ಹಾಕುವ ಪ್ರಸಂಗ ಎದುರಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw