ವಿಕ್ಟೋರಿಯಾ ರಾಣಿ ಕಾಲದ ಹಿತ್ತಾಳೆ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನ: ಓರ್ವನ ಬಂಧನ
ಚಿಕ್ಕಮಗಳೂರು: ವಿಕ್ಟೋರಿಯಾ ರಾಣಿ ಕಾಲದ ಹಿತ್ತಾಳೆ ಟೆಲಿಸ್ಕೋಪ್ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಸಂಕ್ರಾತಿ ವೃತ್ತದ ಕೆಂಪರಾಜ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ 1915ರ ಟೆಲಿಸ್ಕೋಪ್ ಮಾರಾಟಕ್ಕೆ ಯತ್ನಿಸುತ್ತಿದ್ದ ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ.
ಟೆಲಿಸ್ಕೋಪನ್ನು ಮೈಸೂರಿನಲ್ಲಿ ಕಡಿಮೆ ಬೆಲೆಗೆ ಖರೀದಿಸಿದ್ದ ಕೆಂಪರಾಜ್ , ಕಡೂರಿನ ಜೈನ್ ಟೆಂಪಲ್ ರಸ್ತೆಯ ವ್ಯಾಪಾರಿಗೆ ಮಾರಲು ಯತ್ನಿಸುತ್ತಿದ್ದ. 15 ಲಕ್ಷ ರೂಪಾಯಿಗೆ ವ್ಯವಹಾರ ಮಾತನಾಡಿದ್ದ. ಇದೇ ವೇಳೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ಪೊಲೀಸರು ಟೆಲಿಸ್ಕೋಪ್ ನ್ನು ವಶಕ್ಕೆ ಪಡೆದುಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw