ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವು!
ಮಡಿಕೇರಿ: ಹೃದಯಾಘಾತದಿಂದ 6ನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ಕೊಡಗಿನ ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ ನಡೆದಿದೆ.
ಕೀರ್ತನ್(12) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲಾ ವಿದ್ಯಾರ್ಥಿಯಾಗಿದ್ದ. ಶನಿವಾರ ತಡ ರಾತ್ರಿ ವೇಳೆ ಎದೆ ನೋವೆಂದು ಬಾಲಕ ಹೇಳಿಕೊಂಡಿದ್ದು, ಪೋಷಕರು ಗಾಬರಿಯಿಂದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಆ ವೇಳೆಗೆ ಕೀರ್ತನ್ ಮೃತಪಟ್ಟಿದ್ದ ಎಂದು ಹೇಳಲಾಗಿದೆ.
ಕೀರ್ತನ್ ನ ತಂದೆ ಮಂಜಾಚಾರಿ ಕೀರ್ತನ್ ಓದುತ್ತಿದ್ದ ಶಾಲೆಯ ಬಸ್ ಚಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಘಟನೆ ಅವರ ಇಡೀ ಕುಟುಂಬವನ್ನೇ ಶೋಕ ಸಾಗರದಲ್ಲಿ ಮುಳುಗಿಸಿದೆ.
ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಅದ್ರಲ್ಲೂ ಎಳೆಯ ಪ್ರಾಯದ ಮಕ್ಕಳು ಕೂಡ ಹೃದಯಾಘಾತದಿಂದ ಮೃತಪಡುತ್ತಿರುವುದು ಸಾಕಷ್ಟು ಆತಂಕಕ್ಕೆ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw