ಬಾವಿಗೆ ಹಾರಿ 70 ವರ್ಷದ ವೃದ್ಧ ಆತ್ಮಹತ್ಯೆಗೆ ಶರಣು!
ಬೆಳ್ತಂಗಡಿ; ವೇಣೂರು ಠಾಣಾ ವ್ಯಾಪ್ತಿಯ ಮೂಡುಕೋಡಿಯಲ್ಲಿ ವ್ಯಕ್ತಿಯೋರ್ವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ಸಂಭವಿಸಿದೆ.
ಮೂಡುಕೋಡಿ ಹುರಾಬೆ ಮನೆ ನಿವಾಸಿ ಪೇದ್ರು ಯಾನೆ ಪಿಶಿರ (70) ಎಂಬವರು ಮೃತ ವ್ಯಕ್ತಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆಮಾಡಿಕೊಂಡಿದ್ದಾರೆ.
ಇವರು ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು ಇದೇಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನಿಸಲಾಗಿದ್ದು, ವೇಣೂರು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw