ಇಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ: ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ಮಡಿಕೇರಿ: ಇಬ್ಬರು ಶಾಲಾ ವಿದ್ಯಾರ್ಥಿನಿಯರ ಮೇಲೆ ಮುಖ್ಯ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಕೊಡಗಿನ ಮಡಿಕೇರಿ ತಾಲೂಕು ವ್ಯಾಪ್ತಿಯ ಪ್ರೌಢಶಾಲೆಯಲ್ಲಿ ಈ ಘಟನೆ ನಡೆದಿದ್ದು, ಮುಖ್ಯ ಶಿಕ್ಷಕ ಮನೋಹರ್ ನಾಯಕ್ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಿಯಾಗಿದ್ದು, ಈತನಿಂದ ದೌರ್ಜನ್ಯಕ್ಕೊಳಗಾದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಪೈಕಿ ಓರ್ವಳು ವಿದ್ಯಾರ್ಥಿನಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.
ದೂರು ದಾಖಲಾದ ಬೆನ್ನಲ್ಲೇ ಆರೋಪಿ ಮನೋಹರ್ ನಾಯಕ್ ನನ್ನು ಶಾಲಾ ಆಡಳಿತ ಮಂಡಳಿ ಅಮಾನತುಗೊಳಿಸಿದೆ. ಕೊಡಗು ಠಾಣಾ ಮಹಿಳಾ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw