ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧಿಸುತ್ತಿರುವುದು ಗೊತ್ತಿಲ್ಲ ಎಂದ ಡಿ.ಕೆ.ಶಿವಕುಮಾರ್!
ಬೆಂಗಳೂರು: ಕೋಲಾರದಲ್ಲಿ ತಾನು ಸ್ಪರ್ಧಿಸುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯನವರು ಘೋಷಿಸಿ ಕೊಂಡಿದ್ದರು. ಈ ವಿಚಾರ ರಾಜ್ಯಾದ್ಯಂತ ಭಾರೀ ಚರ್ಚೆಗೀಡಾಗಿತ್ತು. ಆದರೆ ಈ ವಿಚಾರ ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತೇ ಇಲ್ವಂತೆ!
ಸಿದ್ದರಾಮಯ್ಯನವರು ಕೋಲಾರದಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಕಾರ್ಯಕರ್ತರ ಸಭೆಗೆ ಹೋಗುವುದಾಗಿ ಹೇಳಿದ್ದರು. ಆದರೆ, ಅಲ್ಲಿಂದಲೇ ಸ್ಪರ್ಧಿಸುತ್ತೇನೆ ಅಂತ ಹೇಳಿರೋದು ನನ್ನ ಗಮನಕ್ಕೆ ಬಂದಿಲ್ಲ, ಈ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ಕೋಲಾರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, ಕೋಲಾರದ ಜನತೆಯ ಒತ್ತಡಕ್ಕೆ ಮಣಿದು ಕೋಲಾರದಲ್ಲಿ ತಾನು ಸ್ಪರ್ಧಿಸುವುದಾಗಿ ಹೇಳಿದ್ದರು. ಆದರೆ ಪ್ರತಿನಿತ್ಯ ಜೊತೆಯಾಗಿ ವೇದಿಕೆ ಹಂಚಿಕೊಳ್ಳುತ್ತಿರುವ ಡಿ.ಕೆ.ಶಿವಕುಮಾರ್ ಅವರಿಗೆ ಈ ವಿಚಾರ ಗೊತ್ತೇ ಇಲ್ಲ ಎಂಬಂತೆ ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw