ಶಿರಾಡಿ ಸಾಯಿಬಾಬಾ ದರ್ಶನಕ್ಕೆ ತೆರಳುತ್ತಿದ್ದ ವೇಳೆ ಅಪಘಾತ: 10 ಮಂದಿಯ ದಾರುಣ ಸಾವು
ಶಿರಾಡಿ ಸಾಯಿಬಾಬಾ ದರ್ಶನ ಪಡೆಯಲು ತೆರಳುತ್ತಿದ್ದ ಭಕ್ತರ ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿ 7 ಮಹಿಳೆಯರ ಸಹಿತ 10 ಮಂದಿ ಸಾವನ್ನಪ್ಪಿದ ಘಟನೆ ನಾಸಿಕ್ ನ ಸಿನ್ನಾರ್ ಹೆದ್ದಾರಿಯಲ್ಲಿ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಸುಮಾರು 40ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮುಂಬೈನಿಂದ ಸುಮಾರು 180 ಕಿ.ಮೀ ದೂರದಲ್ಲಿರುವ ನಾಸಿಕ್ನ ಸಿನ್ನಾರ್ ತೆಹಸಿಲ್ನ ಪಥರೆ ಶಿವಾರ್ ಬಳಿ ಬೆಳಿಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಗಾಯಗೊಂಡವರ ಪೈಕಿ 17 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವಾವಿ ಠಾಣಾ ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಒಳಗಾದ ಬಸ್ ಪುಣೆಯ ಅಂಬೇರಿನಾಥ್ ಪ್ರದೇಶಕ್ಕೆ ಸೇರಿದ್ದು ಎಂದು ಹೇಳಲಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಮೃತರಲ್ಲಿ ಏಳು ಮಹಿಳೆಯರು, ಇಬ್ಬರು ಸಣ್ಣ ಹುಡುಗರು ಮತ್ತು ಒಬ್ಬ ಪುರುಷ ಸೇರಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw