ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕನ ಮನೆಗೆ ಐಟಿ ದಾಳಿ
ಚಿಕ್ಕಮಗಳೂರು: ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಗೆ ಬೆಳ್ಳಂಬೆಳಗ್ಗೆ ಐ.ಟಿ. ಅಧಿಕಾರಿಗಳು ಶಾಕ್ ನೀಡಿದ್ದಾರೆ.
8 ಕಾರುಗಳಲ್ಲಿ ಆಗಮಿಸಿರುವ ಐಟಿ ಅಧಿಕಾರಿಗಳು ನಗರದ ಷರಿಫ್ ಗಲ್ಲಿಯಲ್ಲಿರುವ ಅಕ್ಮಲ್ ಅವರ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಅಕ್ಮಲ್ ಒಡೆತನಕ್ಕೆ ಕಾಫಿ ಕ್ಯೂರಿಂಗ್ ಮೇಲೂ ದಾಳಿ ನಡೆಸಿದ್ದಾರೆ.
ಅಕ್ಮಲ್ ಮನೆಯಲ್ಲಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಐಟಿ ದಾಳಿ ಹಿನ್ನೆಲೆಯಲ್ಲಿ ಅಕ್ಮಲ್ ಮನೆ ಬಳಿ ಬಿಗಿ ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw