ಅಂಬೇಡ್ಕರ್ ಕುರಿತು ಡಿವಿಪಿ ಸ್ಪರ್ಧಾ ಪರೀಕ್ಷೆ: ಪ್ರಥಮ ಬಹುಮಾನ 5 ಲಕ್ಷ ರೂ.
ಚಿಕ್ಕಮಗಳೂರು : ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮದಿನಾಚರಣೆಯ ಅಂಗವಾಗಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಡಾ.ಬಿ.ಆರ್ ಅಂಬೇಡ್ಕರ್ ಕುರಿತು ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಯೋಜಿಸಿದೆ. ಗೆದ್ದವರಿಗೆ ಬಹುಮಾನವನ್ನೂ ನೀಡಲಾಗುತ್ತದೆ ಎಂದು ರಾಜ್ಯ ಸಂಚಾಲಕ ಬಾಲಾಜಿ ಎಂ. ಕಾಂಬಳೆ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಈ ಬಾರಿಯ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಮೊದಲ ಮೂವರು ವಿಜೇತರಿಗೆ ಬಹುಮಾನ ಮೊತ್ತ ಹೆಚ್ಚಳ ಮಾಡಲಾಗಿದೆ. ಪ್ರಥಮ ಬಹುಮಾನ 5 ಲಕ್ಷ ರೂಪಾಯಿ, ದ್ವಿತೀಯ ಬಹುಮಾನ 2.5 ಲಕ್ಷ ರೂಪಾಯಿ, ತೃತೀಯ ಬಹುಮಾನ 1 ಲಕ್ಷ ರೂಪಾಯಿ ಇರಲಿದೆ” ಎಂದು ತಿಳಿಸಿದರು.
“ಅಷ್ಟೇ ಅಲ್ಲದೆ ಈ ಬಾರಿ ಜಿಲ್ಲಾ ಮಟ್ಟದಲ್ಲಿಯೂ 3 ಜನ ರ‍್ಯಾಂಕ್ ವಿಜೇತರನ್ನು ಆಯ್ಕೆ ಮಾಡಿ ಬಹುಮಾನ ನೀಡಲು ನಿರ್ಧರಿಸಲಾಗಿದೆ. ಪ್ರಥಮ ಬಹುಮಾನ 15 ಸಾವಿರ ರೂಪಾಯಿ, ದ್ವಿತೀಯ ಬಹುಮಾನ 10 ಸಾವಿರ ರೂಪಾಯಿ, ತೃತೀಯ ಬಹುಮಾನ 5 ಸಾವಿರ ರೂಪಾಯಿ ಇರಲಿದೆ” ಎಂದು ಹೇಳಿದರು.
“ಪರೀಕ್ಷೆಗೆ ಜನವರಿ 7ರಿಂದ ನೋಂದಣಿ ಆರಂಭಿಸಲಾಗಿದ್ದು, ಫೆಬ್ರುವರಿ 28ರಂದು ಕೊನೆಯ ದಿನಾಂಕವಾಗಿರುತ್ತದೆ. 15ರಿಂದ 35 ವರ್ಷ ವಯೋಮಾನದ ವಿದ್ಯಾರ್ಥಿಗಳು, ಯುವಜನರು ವೆಬ್ ಸೈಟ್ https://thedvp.org/registration/– ಭೇಟಿ ನೀಡಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9380678859 ಅನ್ನು ಸಂಪರ್ಕಿಸಬಹುದು” ಎಂದು ಅವರು ಮಾಹಿತಿ ನೀಡಿದ್ದಾರೆ.
ನಾಡಿನ ಎಲ್ಲ ಸಮುದಾಯದ ವಿದ್ಯಾರ್ಥಿ ಯುವಜನರಿಗೆ ಅವಕಾಶ ಇರಲಿದೆ. ಡಾ.ಬಿ.ಆರ್. ಅಂಬೇಡ್ಕರ್ ಅವರ ಜೀವನಾಧಾರಿತ ಪ್ರಶ್ನೆಗಳನ್ನೊಳಗೊಂಡ ಸ್ಪರ್ಧಾ ಪರೀಕ್ಷೆ ನಡೆಸುವ ಮೂಲಕ ದಲಿತ ವಿಧ್ಯಾರ್ಥಿ ಪರಿಷತ್ ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ ಎಂದು ಅವರು ಹೇಳಿದರು.
ಕಳೆದ ಬಾರಿ ಈ ವಿನೂತನ ಪರೀಕ್ಷೆಯನ್ನು ನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ನಡೆಸಲಾಗಿದೆ. ಈಗಾಗಲೇ ಹೋದ ವರ್ಷ ನಡೆದ ಪರೀಕ್ಷೆ ಬಿಡುಗಡೆ ಮಾಡಲಾಗಿದ್ದು, ವಿಜೇತರಿಗೆ ಇದೇ ತಿಂಗಳ 31 ರಂದು ನಡೆಯಲಿರುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿ ಸನ್ಮಾನಿಸಲಾಗುತ್ತಿದೆ. ಬಹುಮಾನ ವಿಜೇತರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ www.thedvp.org ಗೆ ಭೇಟಿ ನೀಡಬಹುದು ಎಂದು ಬಾಲಾಜಿ ಎಂ. ಕಾಂಬಳೆ ಹೇಳಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw