ಅಮಾನವೀಯ ಘಟನೆ: ವೃದ್ಧನನ್ನು ಕಿ.ಮೀ. ಗಟ್ಟಲೆ ರಸ್ತೆಯಲ್ಲಿ ಎಳೆದೊಯ್ದ ಸ್ಕೂಟರ್ ಸವಾರ
ಬೆಂಗಳೂರು: ವೃದ್ಧರೊಬ್ಬರನ್ನು ಸ್ಕೂಟರ್ ನಲ್ಲಿ ಕಿ.ಮೀ. ಗಟ್ಟಲೆ ಎಳೆದುಕೊಂಡು ಹೋದ ಅಮಾನವೀಯ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಸ್ಕೂಟರ್ ಸವಾರನ ವಿರುದ್ಧ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ.
ಒನ್ ವೇ ನಲ್ಲಿ ಬಂದು ನಿಂತಿದ್ದ ಬೊಲೆರೋಗೆ ಡಿಕ್ಕಿ ಹೊಡೆದು, ಅದನ್ನು ಪ್ರಶ್ನಿಸಲು ಸ್ಕೂಟರ್ ಹಿಡಿದ ವೃದ್ಧ ಚಾಲಕನನ್ನು ಸ್ಕೂಟರ್ ಸವಾರ ಸೊಹೈಲ್ ಎಂಬಾತ ಸ್ಕೂಟರ್ ನಲ್ಲಿ ಕಿ.ಮೀ. ಗಟ್ಟಲೆ ಎಳೆದೊಯ್ದು ಅಮಾನವೀಯತೆ ಮೆರೆದಿದ್ದ. ಇದೀಗ ಸೊಹೈಲ್ ವಿರುದ್ಧ ಗೋವಿಂದರಾಜನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್ ಐಆರ್ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿರುವ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ.
ಮಾಗಡಿ ರಸ್ತೆ ಟೋಲ್ ಗೇಟ್ ಬಳಿ ಈ ಕೃತ್ಯ ನಡೆದಿದ್ದು, ಕುವೆಂಪು ಭಾಷಾಭಾರತಿ ಪ್ರಾಧಿಕಾರಕ್ಕೆ ತೆರಳುತ್ತಿದ್ದ ಬೊಲೆರೋ ಚಾಲಕ 71 ವರ್ಷದ ಮುತ್ತಪ್ಪ ಅವರ ವಾಹನಕ್ಕೆ ಹೋಂಡಾ ಆಕ್ಟಿವಾದಲ್ಲಿ ಬಂದ ದ್ವಿಚಕ್ರ ಸವಾರ ಸೊಹೈಲ್ ಡಿಕ್ಕಿ ಹೊಡೆಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ವೇಳೆ ಸೊಹೈಲ್ ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ ಮುತ್ತಪ್ಪ ಅವರು ಆತನ ಸ್ಕೂಟರ್ ನ ಹಿಂದೆ ಹಿಡಿದುಕೊಂಡಿದ್ದಾರೆ. ಇದನ್ನು ನೋಡಿಯೂ ಸೊಹೈಲ್ ಮುತ್ತಪ್ಪ ಅವರನ್ನು ಕಿಲೋ ಮೀಟರ್ ಗಟ್ಟಲೆ ವೃದ್ಧ ಎಂದೂ ನೋಡದೇ ಅಮಾನವೀಯವಾಗಿ ಎಳೆದೊಯ್ದಿದ್ದಾನೆ. ಘಟನೆ ವಿರುದ್ಧ ಸಾರ್ವಜನಿಕರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw