ಪೊಲೀಸ್ ಇನ್ಸ್ ಪೆಕ್ಟರ್ ನ ಹೆಸರಿನಲ್ಲೇ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ!
ಪೊಲೀಸ್ ಇನ್ಸ್ ಪೆಕ್ಟರ್ ರೋರ್ವರ ಇನ್ಸ್ಟಾ ಗ್ರಾಮ್ ಖಾತೆಯನ್ನೇ ಹ್ಯಾಕ್ ಮಾಡಿರೋ ಘಟನೆ ಮಂಗಳೂರಲ್ಲಿ ಬೆಳಕಿಗೆ ಬಂದಿದೆ.
ಉಳ್ಳಾಲ ಪೊಲೀಸ್ ಇನ್ ಸ್ಪೆಕ್ಟರ್ ಸಂದೀಪ್ ಜಿ.ಎಸ್. ಹೆಸರಲ್ಲಿ ಯಾರೋ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದು ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಸಂದೀಪ್ ಅವರ ಹೆಸರಲ್ಲಿ ನಕಲಿ ಇನ್ಸ್ಟಾ ಗ್ರಾಮ್ ಖಾತೆ ತೆರೆದಿರುವ ವಂಚಕರು, ಸಂದೀಪ್ ಅವರ ಸ್ನೇಹಿತರಲ್ಲಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಸಂಶಯಗೊಂಡ ಸ್ನೇಹಿತರು ಸಂದೀಪ್ ಅವರನ್ನು ಸಂಪರ್ಕಿಸಿದ್ದರಿಂದ ಇದು ಬೆಳಕಿಗೆ ಬಂದಿದೆ.
ಫೇಕ್ ಖಾತೆ ತೆರೆದವ ಸಂದೀಪ್ ಅವರ ಅಧಿಕೃತ ಇನ್ ಸ್ಟಾಗ್ರಾಮ್ ಖಾತೆಯಲ್ಲಿರುವ ಬಹುತೇಕ ಸ್ನೇಹಿತರಲ್ಲಿ ಸೋಗಲಾಡಿ ಕಾರಣ ಹೇಳಿ ತುರ್ತಾಗಿ 7,500 ಕಳುಹಿಸು ಎಂದು ಮೆಸೇಜ್ ಮಾಡಿದ್ದಾನೆ. ಇದಕ್ಕಾಗಿ ಮೊಬೈಲ್ ನಂಬರ್ ವೊಂದನ್ನು ಕಳುಹಿಸಿರುವ ವಂಚಕ, ನಾಳೆ ಬೆಳಗ್ಗೆ ಹಣ ಹಿಂದಿರುಗಿಸುವುದಾಗಿ ಹೇಳಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw