ಜನವರಿ 26: BVSವತಿಯಿಂದ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಸನ್ಮಾನ ಕಾರ್ಯಕ್ರಮ - Mahanayaka

ಜನವರಿ 26: BVSವತಿಯಿಂದ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಸನ್ಮಾನ ಕಾರ್ಯಕ್ರಮ

mudnakudu chinnaswamy
19/01/2023

  • ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಬೆಂಗಳೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಜನವರಿ 26 ಸಂವಿಧಾನ ದಿನಾಚರಣೆ ಪ್ರಯುಕ್ತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.


Provided by

ಜನವರಿ 26ರಂದು ಸಂಜೆ 4:30ಕ್ಕೆ ಬೆಂಗಳೂರಿನ ಕೆ.ಆರ್.ಸರ್ಕಲ್ ನಲ್ಲಿರುವ ಅಲ್ಯೂಮ್ನಿ ಅಸೋಸಿಯೇಷನ್ ಸಭಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ‘ಪ್ರಜಾವಾಣಿ’ ದಿನಪತ್ರಿಕೆ ಸಂಪಾದಕರಾದ ರವೀಂದ್ರ ಭಟ್ಟ ಅವರು ಉದ್ಘಾಟಿಸಲಿದ್ದಾರೆ.

ಪ್ರಸಿದ್ದ ಕನ್ನಡ ಸಾಹಿತಿ ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ, ಕವಿ, ಪ್ರಾಧ್ಯಾಪಕರಾಗಿರುವ ಡಾ.ಬೇಲೂರು ರಘುನಂದನ್, ನಿವೃತ್ತ ಡಿಜಿಪಿ ಮರಿಸ್ವಾಮಿ ಐಪಿಎಸ್, ಕರ್ನಾಟಕ ಸರ್ಕಾರದ ನಿವೃತ್ತ ಕಾರ್ಯದರ್ಶಿ ಡಾ.ಬಾಬುರಾವ್ ಮುಡಬಿ ಐಎಎಸ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.


Provided by

ಕ್ರೈಸ್ಟ್ ಲಾ ಅಕಾಡೆಮಿ ಪ್ರಾಧ್ಯಾಪಕರಾದ ಡಾ.ಶ್ರೀನಿವಾಸ್ ಜಿ. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಅಕ್ಕ ಐಎಎಸ್ ಅಕಾಡೆಮಿಯ ಮುಖ್ಯಸ್ಥರಾದ ಡಾ.ಶಿವಕುಮಾರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ