ಮಾಣಿಯಲ್ಲಿ ಮನೆಗೆ ಬೆಂಕಿ: ಸ್ಫೋಟಗೊಂಡ ಗ್ಯಾಸ್ ಸಿಲಿಂಡರ್: ಬೆಚ್ಚಿಬಿದ್ದ ಜನತೆ
ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ನಡೆದಿದೆ.
ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ದೀಪಾ ಎಂಬುವವರ ಮನೆ ಬೆಂಕಿಗಾಹುತಿಯಾಗಿದೆ. ದೀಪ ಅವರುಮನೆಯಲ್ಲಿ ಮಹಿಳೆ ಒಬ್ಬರೆ ಇದ್ದಾಗ ಈ ಘಟನೆ ಸಂಭವಿಸಿದ್ದು, ಬೆಂಕಿ ಕಾಣಿಸುತ್ತಿದ್ದಂತೆ ಅವರು ಹೊರಗಡೆ ಓಡಿ ಹೋಗಿದ್ದಾರೆ. ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಇದರ ಶಬ್ದದಿಂದ ಮಾಣಿ ಜನತೆ ಬೆಚ್ಚಿ ಬಿದ್ದಿದ್ದಾರೆ.
ಈ ಘಟನೆಯಿಂದ ಮನೆಯಲ್ಲಿದ್ದ ವಿದ್ಯುತ್ ಉಪಕರಣ ಸೇರಿದಂತೆ ವಸ್ತುಗಳೆಲ್ಲ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಪುತ್ತೂರು ಅಗ್ಮಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw