ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಮೂಡುತ್ತಿದೆ: ಮಂಗಳೂರಿನಲ್ಲಿ ಪ್ರಿಯಾಂಕ್ ಖರ್ಗೆ ಹೇಳಿಕೆ
ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರೆ ಅವರ ಬೆಳವಣಿಗೆ ಉತ್ತಮವಾಗುತ್ತದೆ ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಹೇಳಿದರು.
ಅವರು ಇಂದು ಸುರತ್ಕಲ್ ಸಮೀಪದ ಮುಕ್ಕ ಅಂಜುಮಾನ್ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಮಾತುಕತೆ ನಡೆಸಿ ಶಿಕ್ಷಕರು ಮಕ್ಕಳ ಜೊತೆ ಯಾವ ರೀತಿ ವ್ಯವಹರಿಸಬೇಕು ಎಂದು ಕಿವಿಮಾತು ಹೇಳಿದರು.
“ಇಂದಿನ ಇಲ್ಲಿನ ವಾತಾವರಣವನ್ನು ಗಮನಿಸುವಾಗ ಮಕ್ಕಳ ಭವಿಷ್ಯದ ಬಗ್ಗೆ ಆತಂಕ ಮೂಡುತ್ತಿದೆ. ನಾವೆಲ್ಲಾ ಶಾಲೆಗೆ ಹೋದ ಬಳಿಕ ಪ್ರಬುದ್ಧರಾಗಿ ಚಿಂತನೆ ಮಾಡಲು ಆರಂಭಿಸಿದೆವು. ಇದಕ್ಕೆ ಅವರಲ್ಲಿ ವೈಜ್ಞಾನಿಕ ಮನೋಭಾವನೆ ಕಡಿಮೆ ಇರುವುದೇ ಕಾರಣ. ಬುದ್ದ, ಬಸವಣ್ಣರಂತಹಾ ದಾರ್ಶನಿಕರು ಪ್ರಬುದ್ಧ ಭಾರತ ಬೆಳೆಯಬೇಕೆಂದು ಚಿಂತಿಸಿದ್ದರು. ವೈಜ್ಞಾನಿಕ ಮನೋಭಾವನೆ ಬೆಳೆದರೆ ಪ್ರಬುದ್ಧ ಭಾರತ ಕಟ್ಟಲು ಸಾಧ್ಯ” ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಮಾಜಿ ಶಾಸಕ ಮೊಯಿದೀನ್ ಬಾವಾ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉಮೇಶ್ ದಂಡೆಕೇರಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಾಂಬಳಿ, ಮಾಜಿ ಉಪಮೇಯರ್ ಬಶೀರ್ ಬೈಕಂಪಾಡಿ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಸಂಘಟನಾ ಕಾರ್ಯದರ್ಶಿ ಹ್ಯಾರಿಸ್ ಬೈಕಂಪಾಡಿ, ಷರೀಫ್ ಚೊಕ್ಕಬೆಟ್ಟು, ಜಲೀಲ್ ಬದ್ರಿಯ, ಎಸ್ ಸಿ ಎಸ್ ಟಿ ಮೋರ್ಚಾ ಅಧ್ಯಕ್ಷ ಮಲ್ಲಿಕಾರ್ಜುನ ಕೋಡಿಕಲ್, ಅಬೂಬಕರ್ ಪ್ಯಾರಡೈಸ್, ಪ್ರಹ್ಲಾದ್ ಮತ್ತಿತರರು ಉಪಸ್ಥಿತರಿದ್ದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw