ಕಾಣೆಯಾಗಿದ್ದ ಸ್ವಾಮೀಜಿ ಸತ್ತೇಗಾಲದ ಸೇತುವೆಯಲ್ಲಿ ಶವವಾಗಿ ಪತ್ತೆ
ಕೊಳ್ಳೇಗಾಲ: ಕಾಣೆಯಾಗಿದ್ದ ಸ್ವಾಮೀಜಿಯೊಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಕಾವೇರಿ ಸೇತುವೆ ಬಳಿ ನಡೆದಿದೆ.
ಹನೂರು ತಾಲೂಕಿನ ಪಿಜಿಪಾಳ್ಯ ಗ್ರಾಮದ ಹೊಸಮಠದ ಪೀಠಾದಿಪತಿ ರಾಜಶೇಖರ್ ಬುದ್ದಿ ಮೃತ ದುರ್ದೈವಿ. ಕಳೆದ ಕೆಲವು ದಿನಗಳ ಹಿಂದೆ ಕಾಣೆಯಾಗಿದ್ದ ಇವರು ಶವವಾಗಿ ಇಂದು ಪತ್ತೆಯಾಗಿದ್ದಾರೆ. ಸಾವಿಗೆ ಕಾರಣ ನಿಗೂಢವಾಗಿದ್ದು ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಾರಿಗೆ ಲಾರಿ ಡಿಕ್ಕಿ: ಅದೃಷ್ಟವಶಾತ್ ಎಲ್ಲರೂ ಪಾರು!!
ಕಾರಿಗೆ ಲಾರಿಯೊಂದು ಡಿಕ್ಕಿಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರ ಸಮೀಪ ಇಂದು ಮಧ್ಯಾಹ್ನ ನಡೆದಿದೆ.
ತಮಿಳುನಾಡು ಮೂಲದ ಲಾರಿಯೊಂದು ಅತಿವೇಗವಾಗಿ ಬಂದ ಪರಿಣಾಮ ನಿಯಂತ್ರಣ ತಪ್ಪಿ ಕಾರಿನ ಒಂದು ಬದಿಗೆ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಎಲ್ಲರೂ ಪಾರಾಗಿದ್ದಾರೆ.
ಎರಡೂ ವಾಹನಗಳು ಜಖಂಗೊಂಡಿದ್ದು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದ್ದು ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದುಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw