ಬೆಳ್ತಂಗಡಿ: ಅಕ್ರಮ ಗೋ ಮಾಂಸ ಅಡ್ಡೆಗೆ ದಾಳಿ: 3 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು - Mahanayaka
6:21 AM Thursday 6 - February 2025

ಬೆಳ್ತಂಗಡಿ: ಅಕ್ರಮ ಗೋ ಮಾಂಸ ಅಡ್ಡೆಗೆ ದಾಳಿ: 3 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು

beef meat
22/01/2023

ಬೆಳ್ತಂಗಡಿ: ತಾಲೂಕಿನ ಮದ್ದಡ್ಕ ಬಳಿ ಅಕ್ರಮವಾಗಿ ಗೋ ಮಾಂಸ ತಯಾರಿಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿದ ಘಟನೆ ಜ.20 ರಾತ್ರಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋ ವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ  ಸ್ಥಳೀಯರಿಂದ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ಲಭಿಸಿದ್ದು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ರಾತ್ರಿ ವೇಳೆ  ದಾಳಿ ನಡೆಸಿ ಸುಮಾರು 55 ಕೆಜಿ ಯಷ್ಟು ಗೋ ಮಾಂಸ ಹಾಗೂ  ಮಾಂಸ ತಯಾರಿಸುತಿದ್ದ ಸೊತ್ತುಗಳು ಸೇರಿದಂತೆ ಆರೋಪಿಗಳನ್ನು ಬಂಧಿಸಿದ್ದಾರೆ.

ಹಮೀದ್ , ಇಸ್ಮಾಯಿಲ್ ಮತ್ತು ಹಾರಿಸ್ ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇವರ ವಿರುದ್ಧ ಕರ್ನಾಟಕ ಗೋವಧೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣ ಅಧಿನಿಯಮದಡಿ  ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ