ಸಿದ್ದರಾಮಯ್ಯ ಮತ್ತೊಮ್ಮೆ  ಸಿಎಂ ಆಗಬೇಕು, ಅವರು ರಿಟೈರ್ ಆದರೆ ನಾನು ಕೂಡ ನಿವೃತ್ತಿ: ಕೈ ಶಾಸಕ ಸಿ.ಪುಟ್ಟರಂಗ ಶೆಟ್ಟಿ - Mahanayaka

ಸಿದ್ದರಾಮಯ್ಯ ಮತ್ತೊಮ್ಮೆ  ಸಿಎಂ ಆಗಬೇಕು, ಅವರು ರಿಟೈರ್ ಆದರೆ ನಾನು ಕೂಡ ನಿವೃತ್ತಿ: ಕೈ ಶಾಸಕ ಸಿ.ಪುಟ್ಟರಂಗ ಶೆಟ್ಟಿ

puttaranga shetty
22/01/2023

ಚಾಮರಾಜನಗರ: ಸಿದ್ದರಾಮಯ್ಯ ರಾಜ್ಯದಲ್ಲಿ‌ ಮತ್ತೊಮ್ಮೆ ಸಿಎಂ ಆಗಬೇಕೆಂದು ಕಾಂಗ್ರೆಸ್ ಶಾಸಕ ಸಿ.ಪುಟ್ಟರಂಗ ಶೆಟ್ಟಿ ಹೇಳಿದ್ದಾರೆ.

ಚಾಮರಾಜನಗರದಲ್ಲಿ ನಡೆದ ಕುರುಬರ ಸಂಘದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹಿಂದುಳಿದ ವರ್ಗಗಳ  ಹರಿಕಾರರು, ನನ್ನ ನೆಚ್ಚಿನ ನಾಯಕರಾದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬೇಕು.‌

2013 ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ  5 ವರ್ಷಗಳ ಕಾಲ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹೆಚ್ವಿನ ಒತ್ತು ನೀಡಿದ್ದರು ಎಂದು ಸಿದ್ದು ಸಿಎಂ ಆಗಬೇಕೆಂದು ಚುನಾವಣಾ ಪೂರ್ವವೇ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ.

ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ  ಹಿಂದುಳಿದ ವರ್ಗಗಳ ಸಮುದಾಯ ಭವನಗಳು ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನ ನೀಡಿದ್ದರು. ನನ್ನ ಕ್ಷೇತ್ರದಲ್ಲಿ ತಾಲೂಕು ಕುರುಬರ ಸಂಘದ ಸಮುದಾಯ ಭವನಕ್ಕೆ 1 ಕೋಟಿ, ಉಪ್ಪಾರ ಸಮುದಾಯ ಭವನಕ್ಕೆ 2 ಕೋಟಿ ಅಲ್ಲದೆ ಗ್ರಾಮಾಂತರ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಆದ್ಯತೆ ನೀಡಿದ್ದರು.  ಅವರು ಮತ್ತೆ ಮುಖ್ಯಮಂತ್ರಿಯಾದರೆ ಸಾಮಾಜಿಕ ನ್ಯಾಯ ದೊರೆಯುವುದರಲ್ಲಿ ಯಾವುದೇ ಸಂದೇಹವಿಲ್ಲ, ಅವರು ರಾಜಕೀಯದಿಂದ ನಿವೃತ್ತಿಯಾದರೇ ನಾನು ನಿವೃತ್ತಿಯಾಗುತ್ತೇನೆ ಎಂದು ಘೋಷಿಸಿದರು.

ಉಪ್ಪಾರ ಸಮುದಾಯದವನಾದ ನಾನು ಮೂರು ಬಾರಿ ಶಾಸಕನಾಗಲು ಸಿದ್ದರಾಮಯ್ಯ ಅವರ ಕೊಡುಗೆ ಅಪಾರ. ತದನಂತರ ನಿರಂತರವಾಗಿ ನಮ್ಮ ಹಕ್ಕುಗಳನ್ನು ರಕ್ಷಣೆ ಮಾಡಿದ್ದಾರೆ,  ಅವರ ಜೊತೆಯಲ್ಲಿ ನಾನು ಬೆಳೆದೆ, ಉಪ್ಪಾರ ಸಮಾಜವನ್ನು  ಎಸ್ಟಿಗೆ ಸೇರಿಸಲು ಕುಲಶಾಸ್ತ್ರೀಯ ಆಧ್ಯಯನಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಈಗ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದೆ. ಅವರ ಅವಧಿಯಲ್ಲಿ ಪೂರ್ಣಗೊಂಡಿದ್ದರೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಎಸ್ ಟಿಗೆ ನಮ್ಮ ಸಮಾಜವನ್ನು ಸೇರ್ಪಡೆ ಮಾಡುತ್ತಿದ್ದರು ಎಂದು ವಿಶ್ವಾಸ ವ್ಯಕ್ತಪಡಿಸಿದರು.

2023ರಲ್ಲಿ  ಸಿದ್ದರಾಮಯ್ಯನವರು ಗೆದ್ದು ಮುಖ್ಯಮಂತ್ರಿಯಾಗಬೇಕು, ಅವರು ಸಿಎಂ ಆದರೆ ಬಡವರ ಪರ,  ಸಾಮಾಜಿಕ ನ್ಯಾಯದ ಪರ, ಹಿಂದುಳಿದ ವರ್ಗಗಳ ಪರ ಆಡಳಿತ ಕೊಡುತ್ತಾರೆ ಎಂದರು.

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ