ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ 20 ವರ್ಷ ಜೈಲು ಶಿಕ್ಷೆ
ಬೆಳ್ತಂಗಡಿ; ತಾಲೂಕಿನ ಕಡಿರುದ್ಯಾವರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷ ಕಠಿಣ ಸಜೆ ಹಾಗೂ ರೂ 50 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಶಿಕ್ಷೆಗೆ ಒಳಗಾಗಿರುವ ಆರೋಪಿ ಕಡಿರುದ್ಯಾವರ ಗ್ರಾಮದ ಎರ್ಮಾಳಪಳ್ಕೆ ನಿವಾಸಿ ಬಾಬಿ(48) ಎಂಬಾತನಾಗಿದ್ದಾನೆ. ಈತ 2021ರ ಡಿಸೆಂಬರ್ ನಿಂದ 2022ರ ಫೆಬ್ರವರಿಯವರೆಗೆ ತನ್ನ ಪರಿಚಯದ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ನಡೆಸಿದ್ದ. ಈ ಬಗ್ಗೆ ಬಾಲಕಿ 2022ರ ಮಾರ್ಚ್ ಮೂರರಂದು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಬೆಳ್ತಂಗಡಿ ವೃತ್ತನಿರೀಕ್ಷಕ ಶಿವಕುಮಾರ್ ಅವರ ನೇತೃತವದಲ್ಲಿ ಪೊಲೀಸರು ಪ್ರಕರಣದ ತನಿಖೆ ನಡೆಸಿ ಆರೋಪಿ ಬಾಬಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
ಇದೀಗ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ಅರೋಪಿ ಮಾಡಿರುವ ಆರೋಪ ಸಾಬೀತಾಗಿದ್ದು, ನ್ಯಾಯಾಲಯದ ನ್ಯಾಯಾಧೀಶರಾದ ರಾಧಾಕೃಷ್ಣ ಅವರು ಜ 24 ರಂದು ಆರೋಪಿಗೆ 20ವರ್ಷಗಳ ಕಾರಾಗ್ರಹ ಹಾಗೂ 50ಸಾವಿರ ರೂ ದಂಡ ವಿಧಿಸಿ ಆದೇಶ ಮಾಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LG00SlXNdBFJ1LFb3E40gL
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw