ಶಾಂತವೇರಿಘಾಟ್ ನಲ್ಲಿ ಕಾಡಾನೆ ಹಾವಳಿ: ವಾಹನ ಸವಾರರ ಪರದಾಟ
ಚಿಕ್ಕಮಗಳೂರು: ಚಿಕ್ಕಮಗಳೂರಿನಿಂದ ಶಿವಮೊಗ್ಗ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಶಾಂತವೇರಿಘಾಟ್ ಕಾಡಾನೆ ಹಾವಳಿಯಿಂದಾಗಿ ವಾಹನ ಸವಾರರು ಪ್ರಯಾಣಿಸಲು ಪರದಾಡುವಂತಾಗಿದೆ.
ಶಾಂತವೇರಿ ಘಾಟಿಯಲ್ಲಿ ಕಳೆದೊಂದು ತಿಂಗಳಿನಿಂದ ಕಾಡಾನೆ ಸಂಚಾರ ಮಾಡುತ್ತಿದೆ. ರಾತ್ರಿ ವೇಳೆ ಕಾಡಾನೆ ಸಂಚಾರದಿಂದಾಗಿ ವಾಹನ ಸವಾರರು ಆತಂಕದಿಂದ ರಸ್ತೆಯಲ್ಲಿ ಸಂಚರಿಸುವಂತಾಗಿದೆ.
ಈ ಪ್ರದೇಶದಲ್ಲಿರುವ ಕಾಡಾನೆಗಳನ್ನು ಸ್ಥಳಾಂತರ ಮಾಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಕಾಡಾನೆಗಳ ನಿಯಂತ್ರಣಕ್ಕೆ ಮುಂದಾಗದ ಲಿಂಗದಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ವಾಹನ ಸವಾರರು ಆಕ್ರೋಶ ಹೊರ ಹಾಕಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw