ಅಕ್ರಮ ಆಸ್ತಿಗಳಿಕೆ ಪ್ರಕರಣ: ಅರಣ್ಯಾಧಿಕಾರಿ ಎಸ್.ರಾಘವ ಪಾಟಾಳಿಗೆ 5 ವರ್ಷ ಸಾದಾ ಶಿಕ್ಷೆ - Mahanayaka
2:53 PM Thursday 12 - December 2024

ಅಕ್ರಮ ಆಸ್ತಿಗಳಿಕೆ ಪ್ರಕರಣ: ಅರಣ್ಯಾಧಿಕಾರಿ ಎಸ್.ರಾಘವ ಪಾಟಾಳಿಗೆ 5 ವರ್ಷ ಸಾದಾ ಶಿಕ್ಷೆ

court
28/01/2023

ಜಿಲ್ಲೆಯಲ್ಲಿ ಮತ್ತೊಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣ ಬೆಳಕಿಗೆ ಬಂದಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ ಆರೋಪದ ಮೇರೆಗೆ ಬೆಳ್ತಂಗಡಿ ಸಹ್ಯಾದ್ರಿ ವಲಯ ಅರಣ್ಯಾಧಿಕಾರಿ ಎಸ್.ರಾಘವ ಪಾಟಾಳಿಗೆ 3 ನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯವು 5 ವರ್ಷ ಸಾದಾ ಶಿಕ್ಷೆ ಮತ್ತು 1.50 ಕೋಟಿ ರೂಪಾಯಿ ದಂಡ ವಿಧಿಸಿದೆ.

ದಂಡ ತೆರಲು ತಪ್ಪಿದರೆ ಮತ್ತೆ 1 ವರ್ಷ ಸಾದಾ ಶಿಕ್ಷೆ ಅನುಭವಿಸುವಂತೆ ಆದೇಶಿಸಿದೆ. ಕೊಂಚಾಡಿ-ದೇರೇಬೈಲ್‌ನಲ್ಲಿ ವಾಸವಾಗಿದ್ದ ಎಸ್. ರಾಘವ ಪಾಟಾಳಿಯು ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿದ್ದಾರೆ ಎಂಬ ದೂರಿನ ಮೇರೆಗೆ ವಲಯ ಅರಣ್ಯಾಧಿಕಾರಿಯ ವಿರುದ್ಧ 2011ರ ಜುಲೈ 21ರಂದು ಮಂಗಳೂರು ಲೋಕಾಯುಕ್ತ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅದರಂತೆ ವಾದ-ಪ್ರತಿವಾದ ಆಲಿಸಿದ 3ನೆ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಆರೋಪಿಗೆ 5 ವರ್ಷ ಸಾದಾ ಶಿಕ್ಷೆ ಮತ್ತಯ 1.50 ಕೋ.ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದರೆ ಮತ್ತೆ 1 ವರ್ಷ ಶಿಕ್ಷೆ ಅನುಭವಿಸಲು ಆದೇಶಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ