ಬೆಳುವಾಯಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಆಚರಣೆ
ಮೂಡಬಿದ್ರೆ: ಬೆಳುವಾಯಿಯ ಚರ್ಚ್ ಬಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಂಗ್ಲೆಯಲ್ಲಿ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಬೆಳುವಾಯಿ ಗ್ರಾಮ ಪಂಚಾಯಿತಿನ ಉಪಾಧ್ಯಕ್ಷರಾದ ರವೀಂದ್ರ, ಹಳೆವಿಧ್ಯಾರ್ಥಿ ಸಂಘದ ಅಧ್ಯಕ್ಷರು ನಝೀರ್ ಬೆಳುವಾಯಿ, ಎಸ್ ಡಿಎಂಸಿ ಅಧ್ಯಕ್ಷರಾದ ಗಣಪ, ಹಳೆವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಕೃಷ್ಟ ನಾಯಕ್, ಸಂಚಾಲಕರಾದ ಶಿವರಾಮ ಹೆಗಡೆ, ಶಾಲಾ ಅಧ್ಯಾಪಕರು ಮುದ್ದು, ಮಕ್ಕಳು ಪೋಷಕರು ಹಳೆವಿದ್ಯಾರ್ಥಿಗಳು ಮತ್ತು ಶಾಲಾ ಅಭಿಮಾನಿಗಳು ಹಾಜರಿದ್ದು, ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಕಾರ್ಯಕ್ರಮದ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ನಝೀರ್ ಬೆಳುವಾಯಿ, ಕಾರ್ಯದರ್ಶಿ ಕೃಷ್ಣ ನಾಯಕ್, ಸಂಘದ ಸಂಚಾಲಕರಾದ ಶಿವರಾಮ ಹೆಗಡೆಯವರು ಮಾತನಾಡಿದರು.
ಸಭಾಕಾರ್ಯಕ್ರಮಕ್ಕೆ ಬಂದವರಿಗೆ ಬೊಮ್ಮಿ ಟೀಚರ್ ಧನ್ಯವಾದಗಳನ್ನು ಅರ್ಪಿಸಿದರು ಮತ್ತು ಶಾಲೆಯ ಹೆಡ್ ಟೀಚರ್ ಸ್ವಾಗತಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದವರಿಗೆ ಚಾ, ತಿಂಡಿ ವ್ಯವಸ್ಥೆ ಮಾಡಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw