ಕನ್ನಡದ ಹಿರಿಯ ನಟ ಮನ್ ದೀಪ್ ರಾಯ್ ಹೃದಯಾಘಾತದಿಂದ ನಿಧನ
ಕನ್ನಡ ಚಿತ್ರರಂಗದ ಹಿರಿಯ ನಟ ಮನ್ ದೀಪ್ ರಾಯ್ ಅವರು ತಮ್ಮ ಕಾವಲ್ ಭೈರಸಂದ್ರ ನಿವಾಸದಲ್ಲಿ ತಡರಾತ್ರಿ 1:45ರ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮನ್ ದೀಪ್ ರಾಯ್ ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಶಂಕರ್ ನಾಗ್, ಡಾ.ರಾಜ್ ಕುಮಾರ್ ಸೇರಿದಂತೆ ಕನ್ನಡದ ಅನೇಕ ದಿಗ್ಗಜ ನಟರೊಂದಿಗೆ ನಟನೆ ಮಾಡಿದ್ದರು.
ಮೃತರ ಅಂತ್ಯಕ್ರಿಯೆಯು ಇಂದು ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ನಡೆಯಲಿದೆ ಎಂದು ಎಂದು ವರದಿಯಾಗಿದೆ.
ಕಳೆದ ಡಿಸೆಂಬರ್ ನಲ್ಲಿಯೂ ಮನ್ ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw