ಪೊಲೀಸ್ ಅಧಿಕಾರಿಯ ಗುಂಡೇಟಿಗೆ ಒಡಿಶಾ ಆರೋಗ್ಯ ಸಚಿವ ಬಲಿ
ಭುವನೇಶ್ವರ: ಪೊಲೀಸ್ ಅಧಿಕಾರಿಯ ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.
ಒಡಿಶಾದ ಜಾರ್ಸುಗುಡ ಜಿಲ್ಲೆಯ ಗಾಂಧಿ ಚೌಕ್ ಬಳಿಯ ಬ್ರಜರಾಜನಗರದಲ್ಲಿ ನಿರ್ಮಾಣವಾಗಿದ್ದ ಬಿಜು ಜನತಾ ದಳ ಪಕ್ಷದ ಕಚೇರಿ ಉದ್ಘಾಟನೆಗಾಗಿ ಸಚಿವ ನಬಾ ಕಿಶೋರ್ ದಾಸ್ ತೆರಳಿದ್ದ ವೇಳೆ ಅಸಿಸ್ಟೆಂಟ್ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ಚಂದ್ರದಾಸ್ ಎಂಬವರು ಸಚಿವರ ಮೇಲೆ ಗುಂಡು ನಾಲ್ಕು ಸುತ್ತು ಗುಂಡು ಹಾರಿಸಿದ್ದು, ಈ ಪೈಕಿ 2 ಗುಂಡುಗಳು ಸಚಿವರ ಎದೆಗೆ ತಾಗಿತ್ತು.
ತಕ್ಷಣವೇ ಸಚಿವರನ್ನು ಏರ್ ಲಿಫ್ಟ್ ಮಾಡಿ ಭುವನೇಶ್ವರದ ಅಪೋಲೊ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw