ಯುವಜನರ ಎಚ್ಚರವಾಗಿರಿ: ಸಾಮಾಜಿಕ ಜಾಲತಾಣದಲ್ಲಿ ಬಂದ ಬೆದರಿಕೆ ವಿದ್ಯಾರ್ಥಿಯ ಪ್ರಾಣವನ್ನೇ ಕಸಿದುಕೊಂಡಿತು! - Mahanayaka

ಯುವಜನರ ಎಚ್ಚರವಾಗಿರಿ: ಸಾಮಾಜಿಕ ಜಾಲತಾಣದಲ್ಲಿ ಬಂದ ಬೆದರಿಕೆ ವಿದ್ಯಾರ್ಥಿಯ ಪ್ರಾಣವನ್ನೇ ಕಸಿದುಕೊಂಡಿತು!

harshith
30/01/2023

ಬೆಳ್ತಂಗಡಿ: ಹಣ ನೀಡದಿದ್ದರೆ  ಇನ್ ಸ್ಟ್ರಾಗ್ರಾಂ ಮೂಲಕ ವೈಯುಕ್ತಿಕ ವೀಡಿಯೋವನ್ನು ವೈರಲ್ ಮಾಡುವುದಾಗಿ ಬಂದ ಬೆದರಿಕೆಗೆ ಹೆದರಿ  ವಿಷ ಸೇವಿಸಿ ಅಸ್ವಸ್ಥಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಧರ್ಮಸ್ಥಳ ಗ್ರಾಮದ ಅಶೋಕ ನಗರ ನಿವಾಸಿ  ಕಾಲೇಜು ವಿದ್ಯಾರ್ಥಿ  ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟಿದ್ದಾರೆ

ಬೆಳ್ತಂಗಡಿಯ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ.  ವಿದ್ಯಾರ್ಥಿಯಾಗಿರುವ ಧರ್ಮಸ್ಥಳ ಗ್ರಾಮದ ಅಶೋಕ ನಗರ ನಿವಾಸಿ ಹರ್ಷಿತ್ ಮೃತಪಟ್ಟ ವಿದ್ಯಾರ್ಥಿಯಾಗಿದ್ದಾನೆ.

ಈತನಿಗೆ ಇನ್ ಸ್ಟ್ರಾಗ್ರಾಂ ಖಾತೆಯ ಮೂಲಕ ಅಪರಿಚಿತ ವ್ಯಕ್ತಿ ಪರಿಚಯವಾಗಿದ್ದು ಬಳಿಕ ಚಾಟ್ ಮಾಡುತ್ತಿದ್ದು ಇದಾದ ಬಳಿಕ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಬಳಿಕ ತನ್ನ ಬಳಿ ನಿನ್ನ ವೈಯುಕ್ತಿಕ ವೀಡಿಯೋ ಇದೆ ಹಣ ನೀಡದಿದ್ದಲ್ಲಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಹಣ ನೀಡಲು ಸಾಧ್ಯವಾಗದ ವಿದ್ಯಾರ್ಥಿ ಭಯಗೊಂಡು ಜ.24ರಂದು ಮನೆಯಲ್ಲಿ ವಿಷಸೇವಿಸಿದ್ದಾನೆ. ಕೂಡಲೇ ಆತನನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಚಿಕಿತ್ಸೆ ಫಲಿಸದೇ ಸೋಮವಾರ  ಮೃತಪಟ್ಟಿದ್ದಾರೆ.

ಘಟನೆಯ ಬಗ್ಗೆ ಇದೀಗ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ