BSNL ಕಟ್ಟಡದಿಂದ ಬ್ಯಾಟರಿ ಕದ್ದ ಆರೋಪಿ ಅರೆಸ್ಟ್
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕಲ್ಲೇರಿಯ ಬಿ.ಎಸ್.ಎನ್.ಎಲ್. ಕಟ್ಟಡದಿಂದ ಬ್ಯಾಟರಿ ಕಳವು ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಕೇರಳ ರಾಜ್ಯದ ಕೊಲ್ಲಂ ನಿವಾಸಿಯಾಗಿರುವ ಇಟ್ಟಿ ಪಣಿಕರ್ (57)ಎಂಬಾತನಾಗಿದ್ದಾನೆ. ಈತ ಬಿ.ಎಸ್.ಎನ್.ಎಲ್. ಕಟ್ಟಡದ ಬೀಗ ಒಡೆದು ಅಲ್ಲಿಂದ ಸುಮಾರು 80ಸಾವಿರ ಮೌಲ್ಯದ ಬ್ಯಾಟರಿಗಳನ್ನು ಕಳವು ಮಾಡಿದ್ದ.
ಧರ್ಮಸ್ಥಳ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನಿಂದ ಕಳವು ಮಾಡಿದ್ದ ಸುಮಾರು 80ಸಾವಿರ ಮೌಲ್ಯದ ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಇದೀಗ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw