ಮಗಳ ಮದುವೆಗಾಗಿ ಕೂಡಿಟ್ಟಿದ್ದ 15 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು: ಮಹಿಳೆ ಕಣ್ಣೀರು
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಮನೆಗಳ್ಳರ ಹಾವಳಿ ಹೆಚ್ಚಾಗಿದ್ದು ಜನನಿಬಿಡ ಬಡಾವಣೆಯಲ್ಲಿ ಮನೆಗೆ ಕನ್ನ ಹಾಕಿರುವ ಘಟನೆ ಚಾಮರಾಜನಗರದ ರಾಘವೇಂದ್ರ ಬಡಾವಣೆಯಲ್ಲಿ ಇಂದು ನಡೆದಿದೆ.
ಹೌದು…, ರಾಘವೇಂದ್ರ ಚಿತ್ರಮಂದಿರದ ಎದುರಿನ ಶೋಭಾ ಎಂಬವರ ಮನೆಗೆ ಕಳ್ಳರು ಕನ್ನ ಹಾಕಿದ್ದು ಮಗಳ ಮದುವೆಗೆಂದು ಮಾಡಿಸಿಟ್ಟಿದ್ದ 15 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕ್ಷಣಾರ್ಧದಲ್ಲಿ ಮುಂದಿನ ಬಾಗಿಲು ಮೀಟಿ ಹಿಂದಿನ ಬಾಗಿಲಿನಲ್ಲಿ ಎಸ್ಕೇಪ್ ಆಗಿದ್ದಾರೆ.
ಶೋಭಾ ಅವರ ಪತಿ ಇತ್ತೀಚೆಗೆ ನಿಧನ ಹೊಂದಿದ್ದು ಏಕಾಂಗಿಯಾಗಿ ವಾಸಿಸುತ್ತಿದ್ದರು. ಮಗಳ ಮದುವೆಗೆಂದು ಮಾಡಿಸಿದ್ದ 3 ನೆಕ್ಲೇಸ್, 2 ಜೊತೆ ಬಳೆ, 2 ಸರ, 30 ಜೊತೆ ಓಲೆ, 10 ಉಂಗುರು, ಮುಕ್ಕಾಲು ಕೆಜಿಯಷ್ಟು ಬೆಳ್ಳಿ ಸಾಮಾನುಗಳು ಸೇರಿ ₹15 ಲಕ್ಷಕ್ಕೂ ಅಧಿಕ ಚಿನ್ನಾಭರಣವನ್ನು ಮನೆಯ ಬೀರುವಿನಲ್ಲಿಟ್ಟಿದ್ದರು. ಹಬ್ಬ ಎಂದು ಆಲೂರಿಗೆ ತೆರಳಿದ್ದ ವೇಳೆ ಖದೀಮರು ಹೊಂಚು ಹಾಕಿ ಪ್ರವೇಶದ್ವಾರವನ್ನು ಮೀಟಿ ಚಿನ್ನಾಭರಣ ಕದ್ದು ಹಿಂಬಾಗಿಲಿನಿಂದ ಎಸ್ಕೇಪ್ ಆಗಿದ್ದಾರೆ. ಅಕ್ಕಪಕ್ಕ ಮನೆಗಳು, ಎದುರಿಗೆ ಥಿಯೇಟರ್, ಮುಖ್ಯರಸ್ತೆ ಇದ್ದರೂ ಕಳ್ಳರು ರಾಜಾರೋಷವಾಗಿ ಕನ್ನ ಹಾಕಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw