ಎಲೆಕ್ಟ್ರಾನಿಕ್ಸ್ ಅಂಗಡಿಯ ದ್ವಿಚಕ್ರ ವಾಹನಗಳ ದಾಸ್ತಾನು ಮಳಿಗೆಗೆ ಬೆಂಕಿ
ಎಲೆಕ್ಟ್ರಾನಿಕ್ಸ್ ಫರ್ನೀಚರ್ಸ್ ಮತ್ತು ಎಲೆಕ್ಟ್ರಿಕ್ ವೈಕಲ್ ಡಿವಿಜನ್ ನ ಮಳಿಗೆಯ ಮಳಿಗೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ಎಂಬಲ್ಲಿ ನಡೆದಿದೆ.
ಇಂದು ಬೆಳಗ್ಗೆ ದಟ್ಟವಾದ ಹೊಗೆ ಜೊತೆಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕದಳ ಬೆಂಕಿಯನ್ನು ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಇರುವ ಜಾಗದಲ್ಲಿ ಬೆಂಕಿ ದಟ್ಟವಾಗಿದ್ದು, ವ್ಯಾಪಕವಾಗಿ ಹರಡುತ್ತಿದೆ.
ಎಲೆಕ್ಟ್ರಾನಿಕ್ಸ್ ಜೊತೆಗೆ ಕೊಮಾಕಿ ಕಂಪೆನಿಗೆ ಸೇರಿದ ದ್ವಿಚಕ್ರವಾಹನಗಳ ದಾಸ್ತಾನು ಇರಿಸಲಾಗಿರುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ. ಕೊಮಾಕಿ ಕಂಪೆನಿಯ ಬ್ಯಾಟರಿ ಚಾಲಿತ ಸ್ಕೂಟರ್ ಗಳು ಇಲ್ಲಿದ್ದು, ಇದರ ಬ್ಯಾಟರಿ ಸ್ಪೋಟಗೊಂಡು ಬೆಂಕಿ ಹಚ್ಚಿಕೊಂಡಿರಬಹುದು ಎನ್ನಲಾಗುತ್ತಿದೆ. ಸ್ಥಳೀಯರು ಕೂಡಾ ಕಾರ್ಯಾಚರಣೆಗೆ ಸಾಥ್ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw