ಬಿಳಿಗಿರಿರಂಗನ ಬೆಟ್ಟದಲ್ಲಿ ಹೊಸ ಕೀಟ ಪತ್ತೆ, ದಕ್ಷಿಣ ಭಾರತದಲ್ಲಿ ಮೊದಲ ಬಾರಿ ಗೋಚರ
ಚಾಮರಾಜನಗರ: ದಕ್ಷಿಣ ಭಾರತದಲ್ಲಿ ಇದೇ ಮೊದಲ ಬಾರಿಗೆ ಹೊಸ ಬಗೆಯ ‘ಕಣಜ'(ಕಡಜ)ವು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಪತ್ತೆಯಾಗಿದೆ.
ಏಟ್ರಿಯ ಕೀಟಶಾಸ್ತ್ರಜ್ಞರಾದ ಡಾ.ಎ.ಪಿ.ರಂಜನ್ ಹಾಗೂ ಡಾ.ಪ್ರಿಯದರ್ಶನ್ ಧರ್ಮರಾಜನ್ ಎಂಬವರು ಹೊಸ ಬಗೆಯ ಪರವಾಲಂಬಿ ಕಣಜ( Parasitoid Wasp) ಪತ್ತೆ ಹಚ್ಚಿ ಯೂರೋಪಿಯನ್ ಜರ್ನಲ್ ಆಫ್ ಟ್ಯಾಕ್ಸನಮಿಯಲ್ಲಿ ಪ್ರಕಟಿಸಿದ್ದಾರೆ.
ಜೀವ ವೈವಿಧ್ಯತೆಗೆ ಸಾಕ್ಷಿಯಾಗಿರುವ ಸಮುದಾಯದ ಹೆಸರಾದ ‘ಸೋಲಿಗ’ ಎಂದು ಹೆಸರಿಡಲಾಗಿದೆ. 15 ವರ್ಷಗಳ ಹಿಂದೆ ನಾಗಲ್ಯಾಂಡ್ ನಲ್ಲಿ ಈ ಪರಾವಲಂಬಿ ಕೀಟ ಮೊದಲ ಬಾರಿ ಪತ್ತೆಯಾಗಿತ್ತು. ಬಳಿಕ ಈಗ ಬಿಳಿಗಿರಿರಂಗನ ಬೆಟ್ಟದಲ್ಲಿ ಕಾಣಿಸಿಕೊಂಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw