ಬೆಂಕಿ ಅವಘಡದ ವೇಳೆ ಮನೆಯಿಂದ ಹೊರ ಬರಲಾಗದೇ ಮಹಿಳೆ ಸಜೀವ ದಹನ!
![death](https://www.mahanayaka.in/wp-content/uploads/2022/10/death-1.jpg)
ಬೆಂಗಳೂರು: ಮನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದಾಗಿ ಮನೆಯಿಂದ ಹೊರಬರಲು ಸಾಧ್ಯವಾಗದೇ ಮಹಿಳೆಯೊಬ್ಬರು ಸಜೀವ ದಹನವಾಗಿರುವ ಘಟನೆ ಮಲ್ಲೇಶ್ವರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಂತ್ರಿ ಸ್ಕ್ವೇರ್ ಮಾಲ್ ಹಿಂಭಾಗದಲ್ಲಿರುವ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಮೇರಿ (55) ಮೃತ ದುರ್ದೈವಿ.ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಲೆತ್ನಿಸಿದರು.
ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ. ವಿದ್ಯುತ್ ಶಾರ್ಟ್ ಸರ್ಕೀಟ್’ನಿಂದ ಬೆಂಕಿ ಹೊತ್ತಿಕೊಂಡಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw