ಲಕ್ಷಾಂತರ ಮೌಲ್ಯದ ಸೊತ್ತುಗಳ ಕಳ್ಳತನ ಪ್ರಕರಣ: ಆರೋಪಿ ಅರೆಸ್ಟ್
ಮಣಿಪಾಲ ವಿದ್ಯಾರತ್ನ ನಗರದ ಕೀರ್ತಿ ಸಾಮ್ರಾಟ್ ಅಪಾರ್ಟ್ ಮೆಂಟ್ ನಲ್ಲಿ ನಡೆದ ಲಕ್ಷಾಂತರ ಮೌಲ್ಯದ ಸೊತ್ತುಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮುರುಳಿ ಎನ್.ಡಿಎಂದು ಗುರುತಿಸಲಾಗಿದೆ. ಈತನನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ದೊಡ್ಡರಿ ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಕಳವು ಮಾಡಿರುವ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಜ.28ರಂದು ಮಣಿಪಾಲ ವಿದ್ಯಾರತ್ನ ನಗರದ ಕೀರ್ತಿ ಸಾಮ್ರಾಟ್ ಅಪಾರ್ಟ್ ಮೆಂಟ್ ನ ಎರಡನೇ ಮಹಡಿಯ ರೂಮ್ ಗೆ ನುಗ್ಗಿದ ಕಳ್ಳನು, ಲಾಪ್ ಟಾಪ್, ಕ್ಯಾಮರಾ ಸಹಿತ ಒಟ್ಟು 3.23 ಲಕ್ಷ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದನು. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw