ಟರ್ಕಿ ಭೂಕಂಪ: ಕನ್ನಡಿಗರ ರಕ್ಷಣೆಗೆ ಹೆಲ್ಪ್ ಲೈನ್
ಬೆಂಗಳೂರು: ಸರಣಿ ಭೂಕಂಪದಿಂದ ತತ್ತರಿಸಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ವಿಶೇಷ ಸಹಾಯವಾಣಿಯಯನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಭೂಕಂಪ ಸಂಭವಿಸಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಕನ್ನಡಿಗರು ಸಿಲುಕಿದ್ದರೆ ತಕ್ಷಣ ಮಾಹಿತಿ ನೀಡುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ತಿಳಿಸಲಾಗಿದೆ ಎಂದು ಹೇಳಿದರು.
ಸಚಿವಾಲಯದ ಜತೆ ಸರಕಾರ ನಿರಂತರ ಸಂಪರ್ಕದಲ್ಲಿದೆ. ಟರ್ಕಿ ರಾಯಭಾರ ಕಚೇರಿಯಿಂದಲೂ ಕನ್ನಡಿಗರ ಬಗ್ಗೆ ಎಲ್ಲಾ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲೂ ಸಹಾಯವಾಣಿ ಸ್ಥಾಪಿಸುತ್ತೇವೆ. ಟರ್ಕಿ ಮತ್ತು ಸಿರಿಯಾದಲ್ಲಿ ನೆಲೆಸಿರುವ ಕನ್ನಡಿಗರ ಬಗ್ಗೆ ಕುಟುಂಬ ಸದಸ್ಯರು ಮಾಹಿತಿ ನೀಡಿದರೆ ಅವರನ್ನು ಸಂಪರ್ಕಿಸಿ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ನೆರವು ಒದಗಿಸುತ್ತೇವೆ ಎಂದು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw