ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ: ಬಂಧಿತ ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬೆಳ್ತಂಗಡಿ; ಉಜಿರೆಯಲ್ಲಿ ಲಾಡ್ಜ್ ನಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು ಬಂಧಿಸಿರುವ ಇಬ್ಬರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ಇವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಉಜಿರೆಯ ಎಂ.ಎಸ್.ಎಂ ಲಾಡ್ಜಿಗೆ ದಾಳಿ ನಡೆಸಿದ ಬೆಳ್ತಂಗಡಿ ಪೊಲೀಸರು ಐದು ಮಂದಿ ಮಹಿಳೆಯರನ್ನು ರಕ್ಷಣೆ ಮಾಡಿದ್ದು ಇಬ್ಬರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಐದು ಮಂದಿ ಮಹಿಳೆಯರನ್ನು ಇದೀಗ ಮಂಗಳೂರಿನ ಮಹಿಳಾ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಲಾಗಿದೆ. ಇಬ್ಬರು ಆರೋಪಿಗಳಾದ ಸಂತೋಷ್ ಹಾಗೂ ಇರ್ಷಾದ ಎಂಬವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು ನ್ಯಾಯಾಲಯವು ಇವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಲಾಡ್ಜ್ ನಲ್ಲಿ ನಡೆಯುತ್ತಿದ್ದ ಅನೈತಿಕ ಚಟುವಟಿಕೆಗೆ ಸಂಬಂಧಿಸಿದಂತೆ ಸುರೇಶ್ ಪೂಜಾರಿ ಮತ್ತು ರಮೇಶ್ ಪೂಜಾರಿ ಅವರ ವಿರುದ್ದವೂ ಪ್ರಕರಣ ದಾಖಲಿಸಲಾಗಿದ್ದು ಇವರಿಬ್ಬರೂ ತಲೆ ಮರೆಸಿಕೊಂಡಿದ್ದಾರೆ. ಪೊಲೀಸರು ಪ್ರಕರಣದಬಗ್ಗೆ ತನಿಖೆ ನಡೆಸುತ್ತಿದ್ದಾರೆ.\
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw