ಹಗರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು - Mahanayaka
5:24 PM Thursday 12 - December 2024

ಹಗರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು

vidhanasoudha
09/02/2023

ಬೆಂಗಳೂರು: ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಡಿ ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಇಂದಿನ‌ ಸಚಿವ ಸಂಪುಟ ಅಸ್ತು ಎಂದಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಇಂದಿನ ಸಚಿವ ಸಂಪುಟದಲ್ಲಿ  ಕೃಷಿ ಸಂಶೋಧನಾ ಕೇಂದ್ರದಲ್ಲಿ, ಹೊಸ‌ಕೃಷಿ  ಕಾಲೇಜು ಸ್ಥಾಪಿಸಲು ಆಡಳಿತಾತ್ಮ‌ಕ ಅನುಮೋದನೆ ದೊರೆತಿದೆ.

ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಬಳ್ಳಾರಿ ಜಿಲ್ಲೆಯ ಹಗರಿ ಕೃಷಿ ಸಂಶೋಧನಾ ಕೇಂದ್ರದಲ್ಲಿರುವ ಕೃಷಿ ಕಾಲೇಜು”, ಸ್ಥಾಪನೆಗೆ ಅಗತ್ಯ ಮೂಲಸೌಕರ್ಯ/ ಸಿವಿಲ್ ಕಾಮಗಾರಿಗಳನ್ನು ಕೈಗೊಳ್ಳಲು ‘ಜಿಲ್ಲಾ ಗಣಿಗಾರಿಕೆ ನಿಧಿ’ಯಿಂದ ರೂ.5 ಕೋಟಿ ಅನುದಾನವನ್ನು ಒದಗಿಸಲಾಗಿದೆ.

ಒದಗಿಸಲಾಗುವ 5 ಕೋಟಿ ರೂಪಾಯಿಗಳ ಅನುದಾನ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯು 2022- 23ನೇ ಆರ್ಥಿಕ ಸಾಲಿಗೆ ಅನುಮತಿಸಿರುವ 20 ಕೋಟಿ ರೂಪಾಯಿಗಳ ಅನುದಾನದಲ್ಲಿ ಕಾಲೇಜಿಗೆ ಅಗತ್ಯವಿರುವ ಮೂಲಸೌಲಭ್ಯಗಳನ್ನು/ ಕಾಮಗಾರಿಗಳನ್ನು ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ  ಸಹಯೋಗದೊಂದಿಗೆ ಲೋಕೋಪಯೋಗಿ ಇಲಾಖೆ ಮೂಲಕ ಅನುಷ್ಠಾನಗೊಳಿಸಲು ಹಾಗೂ 2022-23ನೇ ಶೈಕ್ಷಣಿಕ ಸಾಲಿನಿಂದಲೇ 30 ವಿದ್ಯಾರ್ಥಿ ಪ್ರಮಾಣದೊಂದಿಗೆ ಸ್ಥಾಪಿಸಿ, ಸಂಶೋಧನಾ ಕೇಂದ್ರ ಮತ್ತು ಆಸುಪಾಸಿನ ಸಂಶೋಧನಾ ಕೇಂದ್ರಗಳಿಂದ ಹಾಗೂ ಡಿಪ್ಲೋಮಾ ಕಾಲೇಜಿನಲ್ಲಿ ಲಭ್ಯವಿರುವ ಬೋಧಕ/ಬೋಧಕೇತರ ಸಿಬ್ಬಂದಿಯ ಸೇವೆಯನ್ನು ರಿಡಿಪ್ಲಾಯ್‌ಮೆಂಟ್/ನಿಯೋಜನೆ/ಅತಿಥಿ ಉಪನ್ಯಾಸದಿಂದ ಬಳಸಿಕೊಂಡು “ನೂತನ ಕೃಷಿ ಕಾಲೇಜನ್ನು ಪ್ರಾರಂಭಿಸುವುದಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ