ಜ್ಯುವೆಲ್ಲರಿ ನೌಕರನನ್ನು ಹತ್ಯೆಗೈದ ಆರೋಪಿಯ ಮತ್ತಷ್ಟು ಚಿತ್ರಗಳು ಬಿಡುಗಡೆ
ಮಂಗಳೂರು: ನಗರದ ಬಲ್ಮಠ ರಸ್ತೆಯ ಜುವೆಲ್ಲರಿ ಅಂಗಡಿಯೊಂದರಲ್ಲಿ ಫೆಬ್ರವರಿ 3ರಂದು ಮಧ್ಯಾಹ್ನ ಸಿಬ್ಬಂದಿಯೊಬ್ಬನನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದ ಆರೋಪಿಯ ಭಾವಚಿತ್ರವನ್ನು ಪೊಲೀಸರು ಮತ್ರೆ ಬಿಡುಗಡೆಗೊಳಿಸಿದ್ದಾರೆ.
ರಾಘವೇಂದ್ರ ಆಚಾರ್ಯ (54)ರನ್ನು ಒಂಟಿಯಾಗಿದ್ದ ವೇಳೆ ಆರೋಪಿಯು ಕತ್ತು ಸೀಳಿ ಕೊಲೆಗೈದಿದ್ದ. ಊಟಕ್ಕೆ ತೆರಳಿದ್ದ ಅಂಗಡಿ ಮಾಲಕರು ಮರಳಿ ಬರುವ ವೇಳೆ 12 ಗ್ರಾಂ ಚಿನ್ನದೊಂದಿಗೆ ಆರೋಪಿ ಪರಾರಿಯಾಗಿದ್ದ.
ಆರೋಪಿಯು ಚಿನ್ನ ಖರೀದಿಸುವ ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿಯೊಳಗಿದ್ದ ಸಿಬ್ಬಂದಿಯನ್ನು ಚೂರಿಯಿಂದ ತಿವಿದು ಕೊಲೆ ಮಾಡಿದ್ದ. ಸಿಸಿಟಿವಿಗಳಲ್ಲಿ ದಾಖಲಾದ ಚಿತ್ರಣಗಳಲ್ಲಿ ಈ ವ್ಯಕ್ತಿಯ ಭಾವಚಿತ್ರವು ಪತ್ತೆಯಾಗಿದೆ.
ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಮಂಗಳೂರು ಕೇಂದ್ರ ಉಪವಿಭಾಗದ ಎಸಿಪಿ ಮಹೇಶ್ ಕುಮಾರ್ -9480805320 ಮತ್ತು ಸಿಸಿಬಿ ಎಸಿಪಿ ಪಿಎ ಹೆಗಡೆ- 9945054333 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw