ಶೂನ್ಯ ಬಡ್ಡಿ ದರದಲ್ಲಿ 16,500 ಕೋಟಿ ರೂಪಾಯಿ ಸಾಲ ವಿತರಣೆ: ಸಚಿವ ಎಸ್.ಟಿ.ಸೋಮಶೇಖರ್
ಸರಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಶೂನ್ಯ ಬಡ್ಡಿ ದರದಲ್ಲಿ ಸಹಕಾರಿ ಸಂಘಗಳ ಮೂಲಕ 22 ಲಕ್ಷ ಮಂದಿ ರೈತರಿಗೆ ಕಳೆದ ಜನವರಿ ಅಂತ್ಯದ ವೇಳೆಗೆ 16,500 ಕೋಟಿ ರೂಪಾಯಿ. ಸಾಲ ವಿತರಿಸಲಾಗಿದೆ ಎಂದು ರಾಜ್ಯ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಅವರು ಮಂಗಳೂರು ನಗರದ ಕೊಡಿಯಾಲ್‌ಬೈಲ್ ನಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಪ್ರಗತಿಶೀಲನಾ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್‌ನಲ್ಲಿ ಪ್ರಕಟಿಸಿದಂತೆ 2022-23ನೇ ಸಾಲಿನಲ್ಲಿ 33 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 24,000 ಕೋಟಿ ರೂ. ಕೃಷಿ ಸಾಲ ವಿತರಿಸುವ ಯೋಜನೆ ಹಾಕಿಕೊಳ್ಳಲಾಗಿತ್ತು.
ಮುಂದಿನ ಮಾರ್ಚ್ ಅಂತ್ಯದ ವೇಳೆಗೆ ನಿಗದಿತ ಗುರಿ ಸಾಧಿಸಲಾಗುವುದು ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಈಗಾಗಲೇ ರಾಜ್ಯದ 14 ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗಳಿಗೆ ಸ್ವತ: ತಾನು ಭೇಟಿ ನೀಡಿ ಪರಿಶೀಲಿಸಿರುವುದಾಗಿ ತಿಳಿಸಿದ ಅವರು, ರಾಜ್ಯದ ಎಲ್ಲ ಡಿಸಿಸಿ ಬ್ಯಾಂಕ್‌ಗಳಿಗೆ ಗುರಿ ನಿಗದಿಪಡಿಲಾಗಿದೆ. ಅರ್ಹ ರೈತರಿಗೆ ಸಾಲ ವಿತರಣೆಯಲ್ಲಿ ಯಾವುದೇ ತಾರತಮ್ಯ ನಡೆಯದಂತೆ ಎಚ್ಚರ ವಹಿಸಲಾಗಿದೆ ಎಂದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw