ವಿದ್ಯುತ್ ತಂತಿ ಮೇಲೆ ಬಿದ್ದ ಮಸೀದಿ ಗೋಪುರ: ಕಟ್ಟಡ ತೆರವು ವೇಳೆ ಘಟನೆ
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಿನ್ನೆಲೆಯಲ್ಲಿ ಮಸೀದಿ ಕಟ್ಟಡ ತೆರವುಗೊಳಿಸುತ್ತಿದ್ದಾಗ ಮಸೀದಿಯ ಗೋಪುರ ಏಕಾಏಕಿ ಕುಸಿದು ವಿದ್ಯುತ್ ತಂತಿಯ ಬಿದ್ದ ಘಟನೆ ಮಂಗಳೂರು ನಗರದ ಹೊರವಲಯದ ನುಳ್ಳಿಪ್ಪಾಡಿಯಲ್ಲಿ ಎಂಬಲ್ಲಿ ನಡೆದಿದೆ.
ರಸ್ತೆ ಬದಿಯಲ್ಲಿದ್ದ ಮಸೀದಿ ಕಟ್ಟಡವನ್ನು ಜೆಸಿಬಿ ಸಹಾಯದಿಂದ ತೆರವುಗೊಳಿಸಲಾಗುತ್ತಿತ್ತು. ಈ ವೇಳೆ ಕಟ್ಟಡದ ಮುಂಭಾಗ ಏಕಾಏಕಿ ಕುಸಿದ ಪರಿಣಾಮ ಎತ್ತರದ ಗೋಪುರ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದಿದೆ. ಈ ಸಂದರ್ಭದಲ್ಲಿ ಹಲವಾರು ವಾಹನಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದವು. ಅಲ್ಲದೇ ತೆರವು ಕಾರ್ಯ ನೋಡಲು ನೂರಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದರು. ಆದರೆ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಹೊಸ ಬಸ್ ನಿಲ್ದಾಣದಿಂದ ನುಳ್ಳಿಪ್ಪಾಡಿ ತನಕದ ಹೈಟೆನ್ಶನ್ ಸೇರಿದಂತೆ ಹತ್ತಕ್ಕೂ ಅಧಿಕ ಕಂಬಗಳು ನೆಲಕಚ್ಚಿವೆ. ನಗರದಲ್ಲಿ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಅಗ್ನಿಶಾಮಕ ದಳ, ಕೆಎಸ್ ಇ ಬಿ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ತೆರವು ಕಾರ್ಯ ನಡೆಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw