ದುಶ್ಚಟಗಳು ಕೇವಲ ವ್ಯಕ್ತಿಗಳನ್ನು ಮಾತ್ರವಲ್ಲ ಕುಟುಂಬಗಳನ್ನು ಅಸ್ವಸ್ಧಗೊಳಿಸುತ್ತದೆ: ಥಾವರ್ ಚಂದ್ ಗೆಹ್ಲೋಟ್
ಬೆಳ್ತಂಗಡಿ; ದುಶ್ಚಟಗಳು ಕೇವಲ ವ್ಯಕ್ತಿಗಳನ್ನು ಮಾತ್ರವಲ್ಲ ಕುಟುಂಬಗಳನ್ನು ಹಾಗೂ ಸಮಾಜವನ್ನು ಅಸ್ವಸ್ಧಗೊಳಿಸುತ್ತದೆ. ವ್ಯಸನಗಳಿಂದ ಮುಕ್ತರಾಗಿ ಸ್ವಾಸ್ಥ್ಯ ಸಮಾಜ ಕಟ್ಟುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು ಈ ನಿಟ್ಟಿನಲ್ಲಿ ಶ್ರೀಕ್ಷೇತ್ತ ಧರ್ಮಸ್ಥಳದ ಪ್ರಯತ್ನಗಳು ಮಾದರಿಯಾಗಿದೆ ಎಂದು ಕರ್ನಾಟಕದ ಘನ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಅವರು ಗ್ರಾಮಾಭಿವೃದ್ದಿ ಯೋಜನೆ ಹಾಗೂ ಅಖಿಲಕರ್ನಾಟ ಜನಜಾಗೃತಿ ವೇದಿಕೆ ಟ್ರಸ್ಟ್ ಇದರ ವತಿಯಿಂದ ಧರ್ಮಸ್ಥಳದ ಅಮೃತ ವರ್ಷಿಣಿ ಸಭಾಂಗಣದಲ್ಲಿ ನಡೆದ ನವ ಜೀವನ
ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ಧರ್ಮಸ್ಥಳದಿಂದ ನಡೆಯುತ್ತಿರುವ ವಿವಿಧ ಸೇವಾಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ವ್ಯಸನಿಗಳನ್ನು ವ್ಯಸನಮುಕ್ತರಾಗಿ ಮಾಡುವುದು ಅತ್ಯಂತ ದೊಡ್ಡ ಸೇವಾಕಾರ್ಯವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಡಾ ಹೇಮಾವತಿ ಹೆಗ್ಗಡೆಯವರು ಡಾ ವಿರೂಪಾಕ್ಷ ದೇವರ ಮನೆ ಅವರು ಬರೆದಿರುವ ನಿನಗೆ ನೀನೇ ಗೆಳೆಯ ಪುಸ್ತಕವನ್ನು ಬಿಡುಗಡೆ ಗೊಳಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಜನಜಾಗೃತಿ ಜೀವಮಾನ ಸಾಧನಾ ಪ್ರಶಸ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮದ್ಯವ್ಯಸನದ ವಿರುದ್ದ ಜಾಗೃತಿ ಮೂಡಿಸುತ್ತಿರುವ ಡಾ ಥಾಮಸ್ ಸ್ಕರಿಯ ಅವರಿಗೆ ಪ್ರಧಾನ ಮಾಡಲಾಯಿತು.
ವ್ಯಸನಮುಕ್ತರಾದ ಮಂಜುನಾಥ ತೀರ್ಥಹಳ್ಳಿ ಅವರು ತಮ್ಮ ಅನುಭವವನ್ನು ಹಂಚಿಕೊಂಡರು,
ಮದ್ಯಮುಕ್ತರಾದವರಿಗೆ ಗುರುತಿನ ಚೀಟಿಗಳನ್ನು ರಾಜ್ಯಪಾಲರು ವಿತರಿಸಿದರು. ಜಾಗೃತಿ ಅಣ್ಣಾ ಜಾಗೃತಿ ಮಿತ್ರ ಪ್ರಶಸ್ತಿಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಡಿ ಹರ್ಷೇಂದ್ರಕುಮಾರ್, ಜನಜಾಗೃತಿ ವೇದಿಕೆಯ ರಾಜ್ಯ ಅಧ್ಯಕ್ಷ ರಾಜಣ್ಣ ಕೊರವಿ ಉಪಸ್ಥಿತರಿದ್ದರು, ಗ್ರಾಮಾಭಿವೃದ್ದಿ ಯೋಜನೆಯ ಕಾರ್ಯನಿರ್ವಾಹಕ ನುರ್ದೇಶಕ ಡಾ ಎಲ್ ಹೆಚ್ ಮಂಜುನಾಥ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜನಜಾಗೃತಿ ವೇದಿಕೆಯ ಕಾರ್ಯದರ್ಶಿ ವಿವೇಕ್ ವಿನ್ಸೆಂಟ್ ಪಯಸ್ ಸನ್ಮಾನಿತರನ್ನು ಪರಿಚಯಿಸಿದರು.ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಮದ್ಯಮುಕ್ತರು ಹಾಗೂ ಕುಟುಂಬಸ್ಥರು ಭಾಗಿಗಳಾದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw