ಫೆಬ್ರವರಿ 22ರಂದು ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರ ಸಾಹಿತ್ಯಗೋಷ್ಠಿ ಮತ್ತು ಸನ್ಮಾನ ಕಾರ್ಯಕ್ರಮ - Mahanayaka
8:13 PM Friday 20 - September 2024

ಫೆಬ್ರವರಿ 22ರಂದು ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರ ಸಾಹಿತ್ಯಗೋಷ್ಠಿ ಮತ್ತು ಸನ್ಮಾನ ಕಾರ್ಯಕ್ರಮ

mudnakudu chinnaswamy
15/02/2023

ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ (BVS) ಹಾಗೂ ಮೈಸೂರು ವಿಶ್ವವಿದ್ಯಾಲಯದ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪರಸ್ಕೃತ ಡಾ.ಮೂಡ್ನಾಕೂಡು ಚಿನ್ನಸ್ವಾಮಿಯವರ ಸಾಹಿತ್ಯಗೋಷ್ಠಿ ಮತ್ತು ಸನ್ಮಾನ ಕಾರ್ಯಕ್ರಮವು ಫೆಬ್ರವರಿ 22ರಂದು ಮೈಸೂರು ವಿಶ್ವವಿದ್ಯಾಲಯದ ಬಿ.ಎಂ.ಶ್ರೀ ಸಭಾಂಗಣದಲ್ಲಿ ನಡೆಯಲಿದೆ.

ವಿಮರ್ಶಕರು, ಲೇಖಕರಾದ ಪ್ರೊ.ಓ.ಎಲ್.ನಾಗಭೂಷಣ ಸ್ವಾಮಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ.ವಿಜಯ ಕುಮಾರ್ ಎಸ್. ಕರಿಕಲ್ ಅಧ್ಯಕ್ಷತೆ ವಹಿಸಲಿದ್ದಾರೆ.  ಬಿವಿಎಸ್ ಸಂಯೋಜಕರಾದ ಹೂವಿನ ಸಿದ್ದು ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

ಮಧ್ಯಾಹ್ನ 1 ಗಂಟೆಗೆ ನಡೆಯಲಿರುವ ಸಾಹಿತ್ಯಗೋಷ್ಠಿಯ ಅಧ್ಯಕ್ಷತೆಯನ್ನು  ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಕಾಳೇಗೌಡ ನಾಗವಾರ ವಹಿಸಿದ್ದಾರೆ. ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಪ್ರೊ.ಎಸ್.ಡಿ.ಶಶಿಕಲಾ ಅವರು, ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರ ಕಾವ್ಯ ಕುರಿತಂತೆ ವಿಚಾರ ಮಂಡನೆ ಮಾಡಲಿದ್ದಾರೆ.


Provided by

ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನ ಹಾಗೂ ವಿಸ್ತರಣ ಕೇಂದ್ರ ಮೈಸೂರು ಇದರ ನಿರ್ದೇಶಕರಾದ ಡಾ.ಎಸ್.ನರೇಂದ್ರ ಕುಮಾರ್ ಅವರು ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರ ನಾಟಕ ಮತ್ತು ಕಥಾ ಸಾಹಿತ್ಯದ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಮಧ್ಯಾಹ್ನ 2 ಗಂಟೆಗೆ ಆರಂಭವಾಗುವ ಸಾಹಿತ್ಯಗೋಷ್ಠಿಯಲ್ಲಿ ಕುವೆಂಪು ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕರಾದ ಡಾ.ಎನ್.ಕೆ.ಲೋಲಾಕ್ಷಿ ಅವರು ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರ ಆತ್ಮಕಥೆ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.

ಅಕ್ಕ ಐಎಎಸ್ ಅಕಾಡೆಮಿ ಇದರ ಮುಖ್ಯಸ್ಥರಾದ ಡಾ.ಶಿವಕುಮಾರ ಅವರು ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರ ಬೌದ್ಧ ತಾತ್ವಿಕತೆ ಮತ್ತು ಬಹುತ್ವ ಭಾರತ ವಿಚಾರ ಮಂಡನೆ ಮಾಡಲಿದ್ದಾರೆ.

ಇನ್ನೂ ಡಾ.ಮೂಡ್ನಾಕೂಡು ಚಿನ್ನಸ್ವಾಮಿ ಅವರ ಬದುಕು ಮತ್ತು ಬರಹಗಳು ವಿಚಾರವಾಗಿ ಮುಕ್ತ ಸಂವಾದ ನಡೆಯಲಿದ್ದು, ಈ ಸಂವಾದದಲ್ಲಿ ಖ್ಯಾತ ಲೇಖಕರಾದ ನಾ.ದಿವಾಕರ, ಮತ್ತೋರ್ವ ಖ್ಯಾತ ಲೇಖಕರಾದ ಜಗದೀಶ್ ಕೊಪ್ಪ, ಸಾಹಿತಿ, ಪ್ರಾಧ್ಯಾಪಕರೂ ಆದ ಲತಾ ಮೈಸೂರು, ಪ.ಪೂ. ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಪ್ರಸಿದ್ಧ ಸಾಹಿತಿಗಳಾದ ಡಾ.ಮಂಜು ಕೋಡಿ ಉಗನೆ, ಸಂಶೋಧಕರ ಸಂಘದ ಅಧ್ಯಕ್ಷರಾದ ನಟರಾಜ್ ಶಿವಣ್ಣ ಭಾಗವಹಿಸಲಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ